ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಶಿಕ್ಷಕ ಬಂಧನ
ಕಲಬುರಗಿ,ಆ.14-5ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಆಳಂದ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದಿದೆ.
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನ ಕರೆಯಿಸಿಕೊಂಡು ಶಾಲಾ ಕೋಣೆಯಲ್ಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಾಗಿದ್ದು, ಸದ್ಯ ಶಿಕ್ಷಕನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.