ವಿಶ್ವ ಹೃದಯ ದಿನಾಚರಣೆ
ಗದಗ,ಅ1: ವಿಶ್ವ ಹೃದಯ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಹಾಗೂ ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಮ್ಸ್ ನರ್ಸಿಂಗ್ ಕಾಲೇಜ್ ದಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಿ.ಸಿ.ಕರಿಗೌಡರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶ್ವ ಹೃದಯ ದಿನವನ್ನು ಪರಿಣಾಮಕಾರಿಯಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ನಮ್ಮೆಲ್ಲರ ಮುಖ್ಯ ಕರ್ತವ್ಯವಾಗಿದೆ ಎಂದರು.
ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸಂಗಮೇಶ ಅಸೂಟಿ ಮಾತನಾಡಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ಅವರು ಮಾತನಾಡಿ ಚಟುವಟಿಕೆಗೆ ಹೃದಯವನ್ನು ಬಳಸಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಹೃದಯ ದಿನವನ್ನು ಆಚರಿಸುತ್ತಿದ್ದೇವೆ. ಹೃದಯ ಆರೋಗ್ಯವಾಗಿಡಲು ಬೆಳಗಿನ ಅಥವಾ ಸಂಜೆಯ ನಡೆಗೆ ಸಹಾಯಕಾರಿ ಎಂದು ಅಭಿಪ್ರಾಯ ತಿಳಿಸಿದರು.
ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಜ್ಯೋತಿ ಕರಿಗೌಡರ, ಪ್ರಾಂಶುಪಾಲರು ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್ ಗದಗ, ರವರು ಮಾತನಾಡಿ ನಮ್ಮ ದೇಹವನ್ನು ಸಧೃಡವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾಸನ, ಪೌಷ್ಠಿಕ ಆಹಾರ ಹಾಗೂ ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 7 ರಿಂದ 8 ಗಂಟೆಯವರೆಗೆ ಆರೋಗ್ಯಕರ ನಿದ್ರೆ ಅವಶ್ಯಕವಾಗಿರುತ್ತದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಶ್ರೀನಿವಾಸ ಆರೇರ ಮುಖ್ಯಸ್ಥರು ಚಿಕ್ಕಮಕ್ಕಳ ವಿಭಾಗ, ರೂಪಸೇನ ಚವ್ಹಾನ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಮ್ಸ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲಾ ಸಮೀಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಎಂ.ಎಸ್. ರಬ್ಬನಗೌಡ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.