ಬಿತ್ತನೆ ಬೀಜ ವಿತರಣೆ
ಲಕ್ಷ್ಮೇಶ್ವರ.ಅ.1: ಲಕ್ಷ್ಮೇಶ್ವರದ ರೈತ ಸಂಪರ್ಕ ಕೇಂದ್ರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರು ಹಿಂಗಾರಿ ಬಿತ್ತನೆಯ ಬೀಜಗಳನ್ನು ರೈತರಿಗೆ ವಿತರಿಸಿದರು.
ಬಳಿಕ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ವಲಯದ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ ಕೇಂದ್ರ ಸರ್ಕಾರ ರೈತರಿಗಾಗಿಯೇ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದೇ ರೀತಿ ರಾಜ್ಯ ಸರ್ಕಾರವು ಸಹ ರೈತರಿಗೆ ಬಿತ್ತನೆ ಬೀಜಗಳನ್ನು ಸಹಾಯಧನದ ರೂಪದಲ್ಲಿ ನೀಡುತ್ತಿದ್ದು ರೈತರು ಇದರ ಸದುಪಯೋಗಪಡಿಸಿಕೊಂಡು ಕೃಷಿ ಕ್ಷೇತ್ರವನ್ನು ಹೆಚ್ಚು ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.
ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಕೃಷಿ ಇಲಾಖೆ ಪೂರೈಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೇವಣಪ್ಪ ಮನಗೂಳಿ, ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ ಗೌಡ ನರಸಮ್ಮನವರ ಸೇರಿದಂತೆ ರೈತ ಮುಖಂಡರು ಮತ್ತಿತರರು ಇದ್ದರು