ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: 20ಕ್ಕೂ ಹೆಚ್ಚು ಮಂದಿಗೆ ಗಾಯ
ಸಂಜೆವಾಣಿ ವಾರ್ತೆ
ಮಂಡ್ಯ.ಅ.01- ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸು ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಸ್ಯಾಂಜೋ ಆಸ್ಪತ್ರೆ ಬಳಿ ನಡೆದಿದೆ.
ಬೆಂಗಳೂರು ಕಡೆಯಿಂದ ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಬಂದ ಸಾರಿಗೆ ಬಸ್ಸು ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಎಲ್ಲರನ್ನೂ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸರ್ವೀಸ್ ರಸ್ತೆಯಲ್ಲಿ ಕ್ಯಾಂಟರ್ ನಿಂತಿತ್ತು. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಬಸ್ಸನ್ನು ಪಕ್ಕಕ್ಕೆ ತಿರುಗಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೆÇಲೀಸರು ಗಾಯಾಗಳುಗಳನ್ನು ಮಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ಸ್ಥಳಕ್ಕೆ ಶಾಸಕ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೆÇಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.