ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು : ಡಾ. ಸಿ.ಸಿ. ಪಾಟೀಲ
ಕಲಬುರಗಿ:ಆ.14: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ 2023-24 ನೆಯ ಸಾಲಿನ ವಾರ್ಷೀಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೈ.ಕ.ಶಿ. ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಸಿ.ಸಿ. ಪಾಟೀಲ ಅವರು ಮಾತನಾಡುತ್ತಾ ರಾಷ್ಟ್ರೀಯ ಶಿಕ್ಷಣ ನೀತಿ – 2020 ಈ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗಿದ್ದು ನಿಜ, ಅದನ್ನು ಸರಿ ಪಡಿಸುವ ಹಂತದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು ವಿದ್ಯಾರ್ಥಿಗಳಿಗೆ ಗೊಂದಲಗಳ ಗೂಡಾಗಿದ್ದು. ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಆದಷ್ಟು ಬೇಗನೆ ಗೊಂದಲಗಳನ್ನು ಸರಿಪಡಿಸಬೇಕಾಗಿದೆ.
ಹಾಗೂ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾಪತ್ಮಕ ಯುಗದಲ್ಲಿ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಮೈತ್ರಾದೇವಿ ಹಳೆಮನಿ, ಸಾಂಸ್ಕ್ರತಿಕ ಸಂಘದ ಸಲಹೆಗಾರರು 2023-24 ನೆಯ ಸಾಲಿನ ವಾರ್ಷೀಕ ವರದಿಯನ್ನು ಮಂಡಿಸಿದರು.
ನಿಯೋಜಿತ ಕಾರ್ಯಕ್ರಮದ ಮುಂಚೆ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು, ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿರುವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ರೋಹಿಣಿಕುಮಾರ ಹಿಳ್ಳಿ ಅವರು ಮಾತನಾಡುತ್ತಾ ನಮ್ಮ ಮಹಾವಿದ್ಯಾಲಯದಲ್ಲಿ ಇರುವ ಮೂಲಭೂತ ಸೌಲಭ್ಯಗಳ ಸದುಪಯೋಗವನ್ನು ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಲಹೆ ನೀಡಿದರು.
ಡಾ. ಶಂಕ್ರಪ್ಪ ಕೆ ಅವರು 2023-24 ನೆಯ ಸಾಲಿನ ಕ್ರೀಡಾ ಚಟುವಟಿಕೆಗಳ ವರದಿಯನ್ನು ವಾಚಿಸಿದರು. ಹಾಗೆನೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ
ಡಾ. ಪ್ರಾಣೇಶ ಎಸ್. ಅವರು ಸಹ ಇದೇ ಸಾಲಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಕುರಿತು ವರದಿ ವಾಚನ ಮಾಡಿದರು ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ಪ್ರತಿನಿಧಿಗಳಾಗಿ ನಮ್ಮ ಮಹಾವಿದ್ಯಾಲಯದ ರಾ.ಸೇ.ಯೋ. ಸ್ವಯಂ ಸೇವಕರು ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.
ಕಾರ್ಯಕ್ರಮದ ಸ್ವಾಗತವನ್ನು ಡಾ. ಜಯಶ್ರೀ ಬಡಿಗೇರ, ಐ.ಕ್ಯೂ.ಎ.ಸಿ. ಸಂಯೋಜಕರು ನೇರವೆರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಶ್ರೀಮತಿ. ನಾಗರತ್ನ ಬಿ.ಎಸ್ಸಿ. 4ನೆಯ ಸೆಮ್ ವಿದ್ಯಾರ್ಥಿನಿ ಕಾರ್ಯಕ್ರಮದ ವಂದನಾರ್ಪಣೆಯನ್ನು ಡಾ. ಪ್ರಾಣೇಶ ಎಸ್ ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದ್ಧಿಗಳು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.