ಸಾಗರೋತ್ತರ ದೇಶಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳಿವೆ:ಶಿವಕಾಂತಮ್ಮ
ಬೀದರ, ಅ.14: ಸಾಗರೋತ್ತರ ದೇಶಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಉದ್ಯೋಗ ಅವಕಾಶಗಳಿದ್ದು ಯುವಕರಿಗೆ ಕೌಶಲ್ಯ ಅಭಿವೃದ್ಧಿ ನಿಗಮದಿಂದ ತರಬೇತಿ ನೀಡಿ ಅವರಿಗೆ ದೇಶದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಉದ್ಯೋಗ ಕೊಡುವ ಕೆಲಸವನ್ನು ನಮ್ಮ ನಿಗಮ ಮಾಡುತ್ತಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ಹೇಳಿದರು.
ಅವರು ಮಂಗಳವಾರ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೌಶಲ್ಯ ಮಿಷನ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜೂನ್ ತಿಂಗಳಲ್ಲಿ ಐ.ಟಿ.ಐ. ಡಿಪೆÇ್ಲಮಾ. ಇಂಜಿನಿಯರಿಂಗ್ ಮುಗಿಸಿದ 94 ವಿದ್ಯಾರ್ಥಿಗಳಿಗೆ ಸ್ಲೋವೆಕಿಯಾ ದೇಶಕ್ಕೆ ಕಳಿಸಿದ್ಧೆವೆ. ಅಲ್ಲಿ ಈಗ ಅವರು ಕೆಲಸ ಮಾಡುತ್ತಿದ್ದಾರೆ. ದುಬೈನಲ್ಲಿ ಅಪ್ರೆಂಟಿಸಗಳಿಗೆ 27 ಸಾವಿರ ರೂ. ನೀಡುವದರ ಜೊತೆಗೆ ಅವರ ವೀಸಾ ಮತ್ತು ಪಾಸಪೆÇೀರ್ಟಗಳನ್ನು ಕಂಪನಿಯೆ ಒದಗಿಸಿ ಕೊಡುತ್ತದೆ. ಯು.ಎ.ಇ ಯಲ್ಲಿ ಪುರುಷ ನರ್ಸಗಳಿಗೆ ಒಂದು ಲಕ್ಷಕ್ಕಿಂತ ಹೆಚ್ಚಿನ ಸಂಬಳವನ್ನು ನೀಡಲಾಗುತ್ತದೆ ಈ ರೀತಿಯಲ್ಲಿ ಯುವಕರಿಗೆ ಸಾಗರೋತ್ತರ ದೇಶಗಳಲ್ಲಿ ಬಹಳಷ್ಟು ಉದ್ಯೋಗ ಅವಕಾಶಗಳಿದ್ದು ಈ ಮಾಹಿತಿಯನ್ನು ಎಲ್ಲಾ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ತಿಳಿಸಬೇಕೆಂದು ಹೇಳಿದರು.
ಕೌಶಲ್ಯ ಅಭಿವೃದ್ಧಿ ನಿಗಮದಿಂದ ತರಬೇತಿ ನೀಡಿದರೆ ಸಾಲದು. ಅವರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕಿದೆ. ನಾನು ಈ ಹಿಂದೆ ಕೇರಳ ಕೌಶಲ್ಯ ಅಭಿವೃದ್ಧಿ ನಿಗಮಕ್ಕೂ ಭೇಟಿ ನೀಡಿದ್ದೆ ಆ ರಾಜ್ಯದಲ್ಲಿ ಹೆಚ್ಚು ಕೌಶಲ್ಯ ಭರಿತ ಜನರಿದ್ದು ಅವರು ಜಗತ್ತಿನ ಯಾವುದೇ ದೇಶಗಳಲ್ಲಿ ಹೋದರು ಸಿಗುತ್ತಾರೆ ಮತ್ತು ಅವರು ಜಗತ್ತಿನ ಬಹುತೇಕ ದೇಶಗಳಲ್ಲಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಕೌಶಲ್ಯ ಅಭಿವೃದ್ಧಿ ಇಲಾಖೆ ಜೊತೆಗೆ ವಿವಿಧ ಇಲಾಖೆಯ ಸಹಯೋಗ ಮತ್ತು ಜಿಲ್ಲಾಡಳಿತದಿಂದ ಯುವಕರಿಗೆ ಕೌಶಲ್ಯ ತರಬೇತಿ ನೀಡುವದರ ಜೊತೆಗೆ ಅವರಿಗೆ ಯಾವ- ಯಾವ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳಿವೆ ಎಂಬ ಮಾಹಿತಿಯನ್ನು ನೀಡಬೇಕೆಂದು ಹೇಳಿದರು.
ಯಾವ ಇಂಡಸ್ಟ್ರೀಸಗಳಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳಿವೆ ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಿ ಯುವಕರಿಗೆ ಅಂತಹ ಕೌಶಲ್ಯ ತರಬೇತಿಗಳನ್ನು ನೀಡಬೇಕು ಮತ್ತು ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಬಹಳಷ್ಟು ಯುವಕರಿಗೆ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಸಿಗುವ ಸೌಲಭ್ಯಗಳ ಮಾಹಿತಿ ಇರುವುದಿಲ್ಲ. ಕಳೆದ ಸಲ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಮಾಡಿದಾಗ ಶೇ. 80 ಪ್ರತಿಶತ ಇಂಜಿನಿಯರಿಂಗ್ ಹಾಗೂ ಡಿಪೆÇ್ಲಮ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು.
ಜಿಲ್ಲೆಯ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಇಂಡಸ್ಟ್ರೀಗಳಿಗೆ ಖುದ್ದಾಗಿ ಭೇಟಿ ನೀಡಿ ಅಲ್ಲಿ ಯಾವ ತರಹದ ಕೌಶಲ್ಯ ಕೆಲಸಗಾರರ ಅವಶ್ಯಕತೆ ಇದೆ. ಮತ್ತು ಎಷ್ಟು ಜನರು ಕೆಲಸಕ್ಕೆ ಭೇಕಾಗಿದ್ದಾರೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಅಂತಹ ಕೌಶಲ್ಯ ತರಬೇತಿಗಳನ್ನು ಯುವಕರಿಗೆ ನೀಡಿದಾಗ ಯುವ ನಿಧಿಗೆ ಅರ್ಜಿ ಹಾಕುವವರ ಸಂಖ್ಯೆಯು ಕಡಿಮೆಯಾಗುತ್ತದೆ. ಯುವಕರಿಗೆ ಕೌಶಲ್ಯ ತರಬೇತಿ ನೀಡುವಲ್ಲಿ ಕಾಲೇಜುಗಳ ಪಾತ್ರವು ಬಹಳ ದೊಡ್ಡದಿದೆ. ಅವರಿಗೆ ಕೌಶಲ್ಯ ತರಬೇತಿಗಳನ್ನು ನೀಡುವದರ ಜೊತೆಗೆ ಉದ್ಯೋಗ ಅವಕಾಶಗಳ ಮಾಹಿತಿಯನ್ನು ನೀಡಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ಇಂಜಿನಿಯರಿಂಗ್ ಸೇರಿದಂತೆ ಇತರೆ ಕೋರ್ಸುಗಳನ್ನು ಮುಗಿಸಿದವರಿಗೆ ನೇರವಾಗಿ ಉದ್ಯೋಗ ಸಿಗುವದಿಲ್ಲ ಹಾಗಾಗಿ ಯುವಕರಿಗೆ ಕೌಶಲ್ಯ ತರಬೇತಿಯ ಅವಶ್ಯಕತೆ ಇರುತ್ತದೆ. ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೌಶಲ್ಯ ತರಬೇತಿಗಳನ್ನು ನೀಡಬೇಕೆಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಲೊಕೇಶ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ, ಬೀದರ ಚೆಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಜಿ. ಶೆಟಕಾರ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಬಸವರಾಜ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.