ಪರಿಸರ ಜಾಗೃತಿ ಕಾರ್ಯಕ್ರಮ
ನವಲಗುಂದ,ಆ14: ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಗಳಹಳ್ಳಿ ಗ್ರಾಮದ ಮೃತ್ಯುಂಜಯ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ನಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಹಾಗೂ ಸಸಿಗಳ ನಾಟಿ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಯೋಜನಾಧಿಕಾರಿ ಜಯಂತ.ಕೆ ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ಎಚ್ ಎಫ್ ಮೂಡಿಯಣ್ಣನವರ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ , ಪರಿಸರ ಕಾಳಜಿ ಕುರಿತು ಉಪನ್ಯಾಸ ನೀಡಿದರು. ಆರ್ ಎಂ ಕ್ಯಾಮನಗೌಡ್ರ ಅಧ್ಯಕ್ಷತೆ ವಹಿಸಿದ್ದರು.
ಇದೆ ವೇಳೆ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯ ಹಾಡುವ ಮೂಲಕ ಪ್ರಜ್ಞೆ ಮೂಡಿಸಿದರು. ನಂತರ ಶಾಲಾ ಆವರಣದಲ್ಲಿ ಗಣ್ಯರಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಸಿ ನಡೆಸಲಾಯಿತು
ಸಂಸ್ಥೆಯ ಕೃಷಿ ಮೇಲ್ವಿಚಾರಕ ರವಿ ಪತ್ತಾರ ಶಾಲಾ ಸಮಿತಿಯ ಸದಸ್ಯ ಶಾಂತಪ್ಪ ಹಾಗೂ ಶಾಲೆಯ ಶಿಕ್ಷಕ ವೃಂದ,ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಲ್ಪಾ ಕುರಹಟ್ಟಿ ನಿರೂಪಿಸಿದರು. ಕಾವ್ಯ ನಲವಡಿ ವಂದಿಸಿದರು.