ತಾಯಿಯ ಎದೆಹಾಲು ಅಮೃತಕ್ಕೆ ಸಮಾನ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.14;ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ ಎಂದು ಪೌಷ್ಟಿಕ ಮೇಲ್ವಿಚಾರಕರಾದ ಸಣ್ಣರಂಗಮ್ಮ ತಿಳಿಸಿದರು.ಹಿರಿಯೂರು ತಾಲ್ಲೂಕಿನ ನಾಗನಾಯಕನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಈಚೆಗೆ ನಡೆದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ತಾಯ್ತನದ ಸಂತೋಷ ಅನುಭವಿಸಲು ಕೂಸಿನೊಂದಿಗೆ ಬಾಂಧವ್ಯ ವೃದ್ಧಿಸಲು ತಾಯಂದಿರು ಮಗುವಿಗೆ ಎದೆ ಹಾಲು ಕುಡಿಸಬೇಕು. ತಾಯಿಯ ಎದೆಹಾಲನ್ನು ಅರ್ಧ ಗಂಟೆಯಿAದ ಒಂದು ಗಂಟೆಯ ಒಳಗೆ ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಕೊಡಬೇಕು ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.