ಗ್ರಾಮೀಣ ಕುಡಿಯುವ ನೀರು ಸರಬರಾಜು: ವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಒ
ಸಂಜೆವಾಣಿ ವಾರ್ತೆ
ಸಿರುಗುಪ್ಪ:ಅ,14- ತಾಲ್ಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮದ ಕುಡಿಯುವ ನೀರಿನ ಕೆರೆಗೆ ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಡಿಯುವ ನೀರಿನ ಕೆರೆಯ ಪಕ್ಕದ ಫಿಲ್ಟರ್ ಬೆಡ್ ತೊಟ್ಟಿ ಸ್ವಚ್ಚಗೊಳಿಸಿ ಶುದ್ದೀಕರಿಸಿದ ನೀರನ್ನು ಸರಬರಾಜು ಮಾಡುವಂತೆ  ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಹೆಚ್.ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.
ಉಪ್ಪಾರ ಹೊಸಳ್ಳಿ ಹಾಗೂ ಬಲಕುಂದಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25 ನೇ ಸಾಲಿನ ನರೇಗಾ ಯೋಜನೆಯಡಿ ಅನುಷ್ಠಾನ ಗೊಂಡಿರುವ  02 ದನದ ಶೆಡ್ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. 
ಸಿರುಗುಪ್ಪ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್,  ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ರವೀಂದ್ರ ನಾಯ್ಕ್, ಪಿಡಿಓ, ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.