ಮನುಷ್ಯನ ಗಮನ ಗುರಿಯತ್ತ ಇರಲಿಅಡೆತಡೆಯ ಮೇಲಲ್ಲ; ರಂಭಾಪುರಿ ಶ್ರೀ

ಸಂಜೆವಾಣಿ ವಾರ್ತೆ
ಬಾಳೆಹೊನ್ನೂರು.ಆ.14;ಕಷ್ಟವು ನಾವು ಹೇಗೆ ಬದುಕಬೇಕೆಂಬುದನ್ನು ಕಲಿಸುತ್ತದೆ.ನಷ್ಟವು ನಾವು ಯಾರನ್ನು ನಂಬಬೇಕು ಎಂದು ಕಲಿಸುತ್ತದೆ.ಮನುಷ್ಯನ ಗಮನ ಗುರಿಯತ್ತ ಇರಬೇಕೇ ಹೊರತು ಸಮಸ್ಯೆಅಡೆತಡೆಯ ಮೇಲಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ಶ್ರೀ ರಂಭಾಪುರಿ ಪೀಠದಲ್ಲಿ ಶ್ರಾವಣ ಧರ್ಮಸಮಾರಂಭ ಹಾಗೂ ಲಿಂ.ಶ್ರೀ ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯಭಗವತ್ಪಾದರ ಪುಣ್ಯ ಸ್ಮರಣೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿಆಶೀರ್ವಚನ ನೀಡುತ್ತಿದ್ದರು.ಬದುಕು ಹಣೆಬರಹದ ಮೇಲೆ ನಿಂತಿಲ್ಲ. ಒಂದಿಷ್ಟು ಆತ್ಮಸ್ಥೆöÊರ್ಯಮತ್ತು ಕಠಿಣ ಪರಿಶ್ರಮದಿಂದ ಬದುಕನ್ನು ಬದಲಿಸಿಕೊಳ್ಳುವ ಆಯ್ಕೆಅವರವರ ಕೈಯಲ್ಲಿಯೇ ಇದೆ. ಮನುಷ್ಯ ಫಲಭರಿತ ಬಾಳೆಯಂತೆಬಾಗಬೇಕು. ಬೀಗಬಾರದು. ಒಳ್ಳೆಯತನಕ್ಕೆ ಬೆಲೆಯಿಲ್ಲ ಅನ್ನುವುದುಎಷ್ಟು ಸತ್ಯವೋ ಆ ಒಳ್ಳೆತನ ನಮ್ಮನ್ನು ಕೈ ಬಿಡುವುದಿಲ್ಲಅನ್ನುವುದು ಅಷ್ಟೇ ಸತ್ಯ. ಪೆಟ್ಟು ತಿಂದ ಕಲ್ಲು ಮೂರ್ತಿಯಾಯಿತು.ಆದರೆ ಪೆಟ್ಟು ಕೊಟ್ಟ ಸುತ್ತಿಗೆ ಸುತ್ತಿಗೆಯಾಗಿಯೇ ಉಳಿಯಿತು. ನೋವುಕೊಡುವವರು ಹಾಗೆಯೇ ಉಳಿಯುತ್ತಾರೆ. ನೋವನ್ನು ಉಂಡವರುಜ್ಞಾನಿಗಳಾಗುತ್ತಾರೆ. ಲಿಂ.ಶ್ರೀ ಜಗದ್ಗುರು ಶಿವಾನಂದ ರಾಜೇಂದ್ರಶಿವಾಚಾರ್ಯ ಭಗವತ್ಪಾದರು ಶ್ರಮ ಮತ್ತು ಸಾಧನೆಯ ಮೂಲಕವೀರಶೈವ ಧರ್ಮ ಸಂಸ್ಕೃತಿ ಹಾಗೂ ಗುರು ಪೀಠಗಳಪಾವಿತ್ರö್ಯತೆಯನ್ನು ಹೆಚ್ಚಿಸಿದರು. ರಚನಾತ್ಮಕ ಮತ್ತು ಗುಣಾತ್ಮಕಸತ್ಕಾರ್ಯಗಳನ್ನು ಮಾಡಿ ‘ಶ್ರೀ ರಂಭಾಪುರಿ ಪೀಠದ ನವ ನಿರ್ಮಾಣ ಶಿಲ್ಪಿ’ ಎಂದುಪ್ರಖ್ಯಾತಿಗೊAಡಿದ್ದನ್ನು ಮರೆಯಲಾಗದೆಂದ ಅವರು ಲಿಂ.ಶಿವಾನAದಜಗದ್ಗುರುಗಳವರ ಹೆಸರಿನಲ್ಲಿ ಬಡ ಮಕ್ಕಳಿಗಾಗಿ ವಿದ್ಯಾರ್ಥಿ ನಿಲಯ ಹಾಗೂಯಾತ್ರಿ ನಿವಾಸ ನಿರ್ಮಿಸುವುದರ ಮೂಲಕ ಶ್ರೀ ಪೀಠ ಕೃತಜ್ಞತೆಯನ್ನುಸಲ್ಲಿಸಿದೆ ಎಂದರು.ಹುಡುಗಿ ಹಿರೇಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳುಮಾತನಾಡಿ ಅದೃಷ್ಟ ನಮ್ಮ ಕೈಯಲ್ಲಿಲ್ಲದೇ ಇರಬಹುದು. ಆದರ ನಿರ್ಧಾರಇದೆ. ಸರಿಯಾದ ನಿರ್ಧಾರ ಕೈಗೊಳ್ಳುವುದರ ಮೂಲಕ ಧರ್ಮಕ್ಕೆಮತ್ತು ಗುರು ಪರಂಪರೆಗೆ ಕೀರ್ತಿ ತಂದ ಯಶಸ್ಸು ಲಿಂ.ಶ್ರೀ ಶಿವಾನಂದಜಗದ್ಗುರುಗಳಿಗೆ ಸಲ್ಲುತ್ತದೆ ಎಂದರು. ಸಿದ್ಧರಬೆಟ್ಟ ಕ್ಷೇತ್ರದವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ವೀರಶೈವ ಧರ್ಮಸಂಸ್ಕೃತಿಯ ಸಂವರ್ಧನೆಗೆ ಲಿಂ. ಶ್ರೀ ರಂಭಾಪುರಿ ಶಿವಾನಂದಜಗದ್ಗುರುಗಳು, ಲಿಂ.ಪರಮತಪಸ್ವಿ ಉಜ್ಜಯಿನಿ ಸಿದ್ಧಲಿಂಗಜಗದ್ಗುರುಗಳು ಹಾಗೂ ನಾಗನೂರು ಕಾಶೀನಾಥ ಶಾಸ್ತಿçಗಳುಅಪಾರವಾಗಿ ಶ್ರಮಿಸಿದ್ದನ್ನು ಎಂದೆAದಿಗೂ ಮರೆಯಲಾಗದೆಂದರು.
ಇದೆ ಸಂದರ್ಭದಲ್ಲಿ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ
ಜರುಗಲಿರುವ ಶರನ್ನವರಾತ್ರಿ ದಸರಾ ದರ್ಬಾರ ಕಾರ್ಯಕ್ರಮದ
ಪ್ರಥಮ ಪ್ರಕಟಣೆಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು
ಬಿಡುಗಡೆ ಮಾಡಿದರು.ಬೆಳಗೊಳದ ಬಿ.ಎ.ಶಿವಶಂಕರ್, ಬೊಗಸೆ ಬಿ.ಎಂ.ಬೋಜೇಗೌಡರು,
ಪರದೇಶಪ್ಪನವರ ಮಠದ ಮಧುಕುಮಾರ್, ಬೊಗಸೆ
ರುದ್ರೇಗೌಡರು, ಸಂಕಪ್ಪನವರ, ಸುಜಾತಾ ಅಳವಂಡಿ, ಮಹಾದೇವಿ ಪಾಟೀಲ,ವೀರೇಶ ಕುಲಕರ್ಣಿ, ಮಠದ ರೇಣುಕ, ಶಿವಪ್ರಕಾಶ ಶಾಸ್ತಿç,
ಸಿದ್ಧಲಿಂಗಯ್ಯ ಹಿರೇಮಠ ಮೊದಲಾದವರು ಉಪಸ್ಥಿತರಿದ್ದರು.
