ರಾಯಣ್ಣ ಪ್ರತಿಷ್ಠಾನದಿಂದ ನಾಳೆ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು, ಆ. ೧೪- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ೨೨೭ನೇ ಜಯಂತ್ಯೋತ್ಸವ ಪ್ರಯುಕ್ತ ನಾಳೆ ಬೆಳಿಗ್ಗೆ ೧೧ ಗಂಟೆಗೆ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗೂಳೂರು ಮಹಾಸಂಸ್ಥಾನ ಶ್ರೀ ನಿಡುಮಾಮಿಡಿ ಜಗದ್ಗುರು ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.
ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿಎಂ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್, ನಜೀರ್ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಮಾಜಿ ಮೇಯರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರು ಆಗಮಿಸಲಿದ್ದಾರೆ.
ಅತಿಥಿಗಳಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ವಿಶೇಷ ಆಯುಕ್ತ ಸುರಲ್ಕರ್ ವಿಕಾಶ್ ಕಿಶೋರ್, ಜಂಟಿ ಆಯುಕ್ತ ಪ್ರೀತಮ್ ನಸಲಾಪುರ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಎಡಿಜಿಪಿ ಡಾ. ಸುಭಾಷ್‌ಭರಣಿ ಅವರಿಗೆ ಅಭಿನಂದನೆ.
ಮಾಜಿ ಮೇಯರ್‌ಗಳಾದ ಜೆ. ಹುಚ್ಚಪ್ಪ ರಾಮಚಂದ್ರಪ್ಪ, ಎಸ್.ಕೆ. ನಟರಾಜ್, ಡಿ. ವೆಂಕಟೇಶ್ ಮೂರ್ತಿ, ಶಾರದಮ್ಮ, ಎನ್. ಶಾಂತಕುಮಾರಿ, ಬಿ.ಎಸ್. ಸತ್ಯನಾರಾಯಣ್ಣ, ಜಿ. ಪದ್ಮಾವತಿ, ಬಿ.ಎನ್. ಮಂಜುನಾಥರೆಡ್ಡಿ, ಆರ್. ಸಂಪತರಾಜ್, ಗಂಗಾಂಬಿಕೆ, ಎಂ. ಗೌತಮ್ಮ ಕುಮಾರ್ ರವರು ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಯಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರತಿಷ್ಠಾನದ ಗೌರವ ಅಧ್ಯಕ್ಷ ಜಿ.ಎಲ್. ನಾರಾಯಣಸ್ವಾಮಿ, ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿರವರು ಪ್ರಕಟಣೆಯಲ್ಲಿ ಕೋರಿದ್ದಾರೆ.