ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಜಿಗಜಿಣಗಿ ಚಾಲನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೧೪:ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಚಿದಂಬರ ನಗರದಲ್ಲಿರುವ ಚಿದಂಬರ ಜೋಶಿ ರೊಳ್ಳಿ ಅವರ ಮನೆಯ ಮೇಲೆ ಧ್ವಜಾರೋಹಣ ಮಾಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರö್ಯ ಬಂದು ೭೫ ವರ್ಷ ತುಂಬಿರುವ ಸಂದರ್ಭದಲ್ಲಿ ಸ್ವಾತಂತ್ರö್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು (ಆಜಾದಿ ಕಾ ಅಮೃತ ಮಹೋತ್ಸವ) ಸಂಭ್ರಮದಿAದ ದೊಡ್ಡ ಪ್ರಮಾಣದಲ್ಲಿ ಆಚರಿಸಲು ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ಮನೆ ಮನೆಯಲ್ಲೂ ತ್ರಿವರ್ಣ ಧ್ವಜದ (ಹರ್ ಘರ್ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊAಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಈರಣ್ಣ ರಾವೂರ, ಮಹಾನಗರಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ನಗರ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಸುರೇಶ ಬಿರಾದಾರ, ವಿಜಯ ಜೋಶಿ, ರಾಜೇಶ ತೌಸೆ, ಕಾಂತು ಸಿಂಧೆ, ಪಾಪುಸಿಂಗ್ ರಜಪೂತ, ಪ್ರವೀಣ ಕೂಡಗಿ, ಸಂಪತ್ ಕೋವಳ್ಳಿ, ಪ್ರವೀಣ ನಾಟೀಕಾರ, ವಿನೋದ ಮಣೂರ, ಸಂತೋಷ ಕಮತರ, ಕೃಷ್ಣಾ ರಾಠೋಡ, ವೆಂಕಟೇಶ ಜೋಶಿ (ನಂದೊಡಗಿ) ವೆಂಕಟೇಶ ಜೋಶಿ ಉಪಸ್ಥಿತರಿದ್ದರು.