ನಶಾ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೪: 78ನೇ ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ  ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಡೇಟ್ ಚಾರಿಟೇಬಲ್ ಸೊಸೈಟಿ ಹಾಗೂ ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಸಹಯೋಗದೊಂದಿಗೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞಾ ಸ್ವೀಕರಿಸುವ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ನಡೆಸಲಾಯಿತು.ಈ ಸಂದರ್ಭದಲ್ಲಿ ಡೇಟ್ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಡಾ.ಹೆಚ್.ಎಸ್.ಶಿವಣ್ಣ, ಯೋಜನಾ ನಿರ್ದೇಶಕಿ ಜಿ.ಗಾಯತ್ರಿ, ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.