ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ
ಕಲಬುರಗಿ:ಆ.13:ಕಲಬುರಗಿ ತಾಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೋಬಳಿ ಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಮತ್ತು ಬಾಲಕಿಯರ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ ಆಲ್ದಾರ್ತಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಕ್ರೀಡೆಗಳಲ್ಲಿನ ಸಾಧನೆಗಾಗಿ ಸಿಬ್ಬಂದಿ-ವರ್ಗದವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಎಂ.ಎಸ್.ಅಲ್ಲಾಬಕಾಷ್ ಹರ್ಷ ವ್ಯಕ್ತಪಡಿಸಿದ್ದಾರೆ