ಆ. 15 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ
ಕಲಬುರಗಿ:ಆ.13:ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿವಹಿಸುವರು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹಾಗೂ ಮುಖ್ಯಮಂತ್ರಿಯವರ ಸಲಹೆಗಾರರು (ನೀತಿ ಮತ್ತು ಕಾರ್ಯಕ್ರಮ) ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತೀಮಾ ಅವರು ಗೌರವ ಉಪಸ್ಥಿತಿ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ ಹಾಗೂ ಕಲಬುರಗಿ ಅಚ್ಟುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಎಂ. ಸುಂದರೇಶ ಬಾಬು, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕರು ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್ ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.