ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್
ಕಲಬುರಗಿ,ಆ.13-ಚಲಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟದಿಂದ ಕ್ಷಣಾರ್ಧದಲ್ಲೇ ಸುಟ್ಟು ಕರಕಲಾಗಿರುವ ಘಟನೆ ನಗರದ ಫಿಲ್ಟರ್ ಬೆಡ್ ಪ್ರದೇಶದಲ್ಲಿ ಸೋಮವಾರ ನಡೆದಿದೆ.
ರೋಹಿತ್ ಚವ್ಹಾಣ್ ಎಂಬುವವರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಬ್ಯಾಟರಿ ಸ್ಫೋಟದ ಶಬ್ದ ಕೇಳಿಸಿದೆ. ತಕ್ಷಣವೇ ಕೆಳಗಿಳಿದ ರೋಹಿತ್ ಬೈಕ್ ನೋಡುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.