ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ.ಸುಜಾತಾ ಜಂಗಮಶೆಟ್ಟಿ ನೇಮಕ
ಕಲಬುರಗಿ,ಆ.13-ರಂಗಕರ್ಮಿ ಡಾ.ಸುಜಾತಾ ಜಂಗಮಶೆಟ್ಟಿ ಅವರನ್ನು ಕಲಬುರಗಿ ರಂಗಾಯಣ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಕಳೆದ ಮೂರು ದಶಕಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ಡಾ.ಸುಜಾತಾ ಜಂಗಮಶೆಟ್ಟಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸರ್ಕಾರ ಈಗ ಈಗ ಅವರನ್ನು ರಂಗಾಯಣ ನಿರ್ದೇಶಕರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ, ರಂಗ ಸಮಾಜ (ರಂಗಾಯಣ) ಸದಸ್ಯರಾಗಿ, ಚಲನಚಿತ್ರದ ಸಬ್ಸಿಡಿ ಕಮಿಟಿ ಸದಸ್ಯರಾಗಿ, ಗುಬ್ಬಿ ವೀರಣ್ಣ ರಂಗ ಪ್ರಶಸ್ತಿ ಸಮಿತಿ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಾಗೃತಿ ಸಮಿತಿ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್‍ನ ಪ್ರಕಟಣಾ ಸಮಿತಿ, ಗ್ರಂಥಾಲಯ ಪ್ರಾಧಿಕಾರ, ಕಸಾಪ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿ, ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಸಗಟು ಖರೀದಿಗೆ ಬಂದ ಕೃತಿಗಳ ಆಯ್ಕೆ ಸಮಿತಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪುಸ್ತಕ ಮೌಲ್ಯ ಮಾಪನ ಸದಸ್ಯರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ.