ಪ್ರವೀಣ ಗುರವಗೆ ಪಿಎಚ್.ಡಿ
ಕೊಲ್ಹಾರ:ಆ.13: ಬಬಲೇಶ್ವರ ತಾಲೂಕಿನ ಹೊಳೆ ಹಂಗರಗಿ ಗ್ರಾಮದ ಪ್ರವೀಣ ಗುರವ ಅವರು ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಸ್ತಪ್ರತಿಶಾಸ್ತ್ರ ವಿಭಾಗದ ಮಾರ್ಗದರ್ಶಕರಾದ ಡಾ. ಸಣ್ಣವೀರಣ್ಣ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯಕ್ಕೆ ರಾಷ್ಟ್ರೋತ್ಥಾನ ಪರಿಷತ್ತಿನ ಕೊಡುಗೆ ಎಂಬ ವಿಷಯದ ಕುರಿತು ಅಧ್ಯಯನ ಮಾಡಿ ಪಿಎಚ್.ಡಿ ಪದವಿ ಪಡೆದುಕೊಂಡಿರುತ್ತಾರೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಹಸ್ತಪ್ರತಿಶಾಸ್ತ್ರ ವಿಭಾಗದಲ್ಲಿ ಭಾಷಾ ನಿಕಾಯದ ಡೀನ್ ರ ಸಮ್ಮುಖದಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಮೌಖಿಕ ಪರೀಕ್ಷೆಯ ಮೂಲಕ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಪಿಎಚ್.ಡಿ ಪದವಿ ಘೋಷಿಸಿದ್ದಾರೆ.