ಪ್ರದರ್ಶನ ಉದ್ಘಾಟನೆ
ಧಾರವಾಡ,ಆ13: ಸಾಂಪ್ರದಾಯಕ ಸ್ವಾತಂತ್ರ್ಯೋತ್ಸವದ ಜೊತೆಗೆ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳು, ಐತಿಹಾಸಿಕತೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಧಾರವಾಡ ಜಿಲ್ಲಾಡಳಿತ ಈ ವರ್ಷ ಮಾಡಿದೆ. ನಮ್ಮ ಬಗ್ಗೆ ನಾವು ಹೆಮ್ಮೆ ಪಡುವ ಅನೇಕ ಸಂಗತಿಗಳನ್ನು ತಿಳಿಸಲು ಪ್ರಯತ್ನ ಮಾಡಿದ ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿತ ಅಭಿನಂದನಾರ್ಹವಾಗಿದೆ ಎಂದು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು.