ಪಾರಂಪರಿಕ ನಡಿಗೆ ಯಶಸ್ವಿ
ಹುಬ್ಬಳ್ಳಿ,ಆ13: ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಹೋರಾಟಗಾರರು ಹೋರಾಡಿದ್ದಾರೆ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪಾರಂಪರಿಕ ನಡಿಗೆಯೂ ಯಶಸ್ವಿಯಾಗಿದೆ. ಆ ಮೂಲಕ ಹೊಸ ಪರಂಪರೆ ಪ್ರಾರಂಭವಾಗಿದೆ. ಪ್ರತಿಯೊಬ್ಬರೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಗೌರವಿಸಬೇಕು ಎಂದು ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಹೇಳಿದರು.
ಇಂದು ವಿದ್ಯಾನಗರದ ಮಹಿಳಾ ವಿದ್ಯಾಪೀಠದಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಸಕರಾದ ಎನ್.ಎಚ್.ಕೋನರೆಡ್ಡಿ ಅವರು ಮಾತನಾಡಿ, ಹುಬ್ಬಳ್ಳಿಯೂ ಸಾಂಸ್ಕೃತಿಕ ನಗರಿ, 2 ನೇ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಧಾರವಾಡ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಎಲ್ಲರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಬೇಕು. ಆ ಮೂಲಕ ಎಲ್ಲರೂ ಸ್ವಾತಂತ್ರ್ಯದ ಹಿರಿಮೆ ಗರಿಮೆಗಳ ಬಗ್ಗೆ ತಿಳಿಯಬಹುದು. ಆಗಸ್ಟ್ 15ರ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ, ಮಹಾಪೌರರಾದ ರಾಮಣ್ಣ ಬಡಿಗೇರ, ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
ಪೆÇಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಜಿಲ್ಲಾ ಪೆÇಲೀಸ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಶಹರ ತಹಶೀಲ್ದಾರ ಕೆ.ಆರ್.ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಜಾನಪದ ತಜ್ಞ ಡಾ.ರಾಮು ಮೂಲಗಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪಸ್ಥಿತರಿದ್ದರು.