ಶಾಲೆ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣಕ್ಕೆ ಸಿದ್ಧತೆ
ನವಲಗುಂದ,ಆ13 : ಆ.15ರಂದು ನಗರದ ಮಾಡಲ್ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆ ಕೈಗೊಂಡು ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕು ಎಂದು ಎಲ್ಲ ತಾಲ್ಲೂಕಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಸುಧೀರ್ ಸಾಹುಕಾರ್ ಹೇಳಿದರು.
ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಪತ್ರಕರ್ತನುದ್ದೇಶಿಸಿ ಮಾತನಾಡಿದ ಅವರು ಶಿಷ್ಟಾಚಾರ ದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ವಿತರಿಸಲು ಕ್ರಮವಹಿಸಲಾಗಿದೆ. ಪರೇಡ್ ಆವರಣ ಹಾಗೂ ಸುತ್ತಮುತ್ತಲಿನ ಜಾಗವನ್ನು ಮುಂಚಿತವಾಗಿ ಸ್ವಚ್ಛಳಿಸಿ ಸಿದ್ಧಗೊಳಿಸುವುದು, ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ, ವೇದಿಕೆ ಅಲಂಕಾರಕ್ಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಸರ್ಕಾರದ ಸುತ್ತೋಲೆಯಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಕಚೇರಿಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಧ್ವಜಾರೋಹಣಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ನಗರದ ಶಾಲಾ, ಕಾಲೇಜು, ಪೆÇಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್‍ಸಿಸಿ, ಪೆÇಲೀಸ್ ಹಾಗೂ ಹೋಂಗಾರ್ಡ್ಸ್ ವತಿಯಿಂದ ಸಾಮೂಹಿಕ ಕವಾಯಿತು ನಡೆಯುವದು ಎಂದರು.
ಅಂದು ನಗರದ ಮಾಡಲ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ 9 ಗಂಟೆಗೆ ಶಾಸಕ ಎನ್ ಎಚ್ ಕೋನರಡ್ಡಿಯವರ ಉಪಸ್ಥಿತಿಯಲ್ಲಿ ತಹಸೀಲ್ದಾರರಿಂದ ಧ್ವಜಾರೋಹಣ ನೆರವೇರಿಸಿ ನಂತರ ವಿದ್ಯಾರ್ಥಿಗಳಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಿ, ನಿಗದಿತ ವೇಳೆಯಲ್ಲಿ ಮುಗಿಯುವಂತೆ ಕ್ರಮಕೈಗೊಳ್ಳಲು ಬಿಇಒ ಜವಾಬ್ದಾರಿ ನೀಡಲಾಗಿದೆ..
ಇದೆ ವೇಳೆ ಸ್ವಾತಂತ್ರ್ಯ ಹೋರಾಟಗಾರರು, ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಗುವುದು ಅಂದು ತಾಲ್ಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ತಿಳಿಸಿದರು.
ಶಿರೇಸ್ತದಾರ ಕೃಷ್ಣಾಜಿ ಅರೇರ, ಕಂದಾಯ ನೀರಿಕ್ಷರಾದ ಕೆ ಎಂ ಪಾಟೀಲ್, ಐ ಆರ್ ಭಜಂತ್ರಿ ಇತರರು ಇದ್ದರು.