ಪ್ರಗತಿ ಪರಿಶೀಲನಾ ಸಭೆ
ಗದಗ,ಆ13: ನರೇಗಾ ಯೋಜನೆಯಡಿ ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಲಾದ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧಕ್ಷತೆ ವಹಿಸಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ಆದ್ಯತೆಯನುಸಾರ ಸರ್ಕಾರಿ ಶಾಲಾಭಿವೃದ್ಧಿ ಕಾಮಗಾರಿಗಳಾದ ಶಾಲಾ ಶೌಚಾಲಯ, ಶಾಲಾ ಕಾಂಪೌಂಡ, ಶಾಲಾ ಅಡುಗೆ ಕೋಣೆ ಹಾಗೂ ಶಾಲಾ ಆಟದ ಮೈದಾನಂತಹ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಹರಡುತ್ತಿರುವ ಡೆಂಗ್ಯೂ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡುವುದು ಹಾಗೂ ಗ್ರಾಮ ಮಟ್ಟದಲ್ಲಿ ಕೈಗೋಳ್ಳಬೇಕಿರುವ ಮುನ್ನೆಚ್ಛರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು
ಸಾಮಾಜೀಕ ಲೆಕ್ಕ ಪರಿಶೋಧನೆ ಆಕ್ಷೇಪಣೆ ಹಾಗೂ ವಸೂಲಾತಿ, ಒಂಬುಡ್ಸಮನ್ ವಸೂಲಾತಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸರಿಯಾಗಿ ಕ್ರಮವಹಿಸಬೇಕು ಮತ್ತು ಗ್ರಾಮ ಆರೋಗ್ಯ ಶಿಬಿರದ ಮಾಹಿತಿಯನ್ನು ಪಂಚತಂತ್ರ-2ನಲ್ಲಿ ಕಡ್ಡಾಯವಾಗಿ ಆರೋಹಿಸಲು ಹಾಗೂ ಪ್ರತಿ ಮಾಹೆ ಗ್ರಾಮ ಪಂಚಾಯತಿ ಟಾಸ್ಕ್ ಫೆÇೀರ್ಸ್ ಸಭೆ ಆಯೋಜನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪ ಕಾರ್ಯದರ್ಶಿಗಳು ಸಿ ಆರ್ ಮುಂಡರಗಿ, ಯೋಜನಾ ನಿರ್ದೇಶಕ ಎಂ. ಬಿ. ಚಳಗೇರಿ , ಮುಖ್ಯ ಯೋಜನಾಧಿಕಾರಿ ನಿರ್ಮಲಾ ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು/ಸಿಬ್ಬಂದಿಗಳು/ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು/ ಜಿಲ್ಲಾ/ ತಾಲ್ಲೂಕು ಮಟ್ಟದ ಎಲ್ಲಾ ಯೋಜನೆಗಳ ಸಿಬ್ಬಂದಿಗಳು ಹಾಜರಿದ್ದರು.