ಬಾಲ್ಯ ವಿವಾಹ ಕುರಿತು ವಿಶೇಷ ಜಾಗೃತಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೩; ಚಿತ್ರದುರ್ಗ ಸರ್ಕಾರಿ ಶಿಕ್ಷಕರ ಶಿಕ್ಷಣ ತರಬೇತಿ ಮಹಾವಿದ್ಯಾಲಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನೂರು ದಿನಗಳ ವಿಶೇಷ ಜಾಗೃತಿ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.ಜಿಲ್ಲಾ ಮಿಷನ್ ಸಂಯೋಜಕ ಬಿ.ವಿನಯ್ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಬಾಲ್ಯ ವಿವಾಹ ನಡೆಯುವುದು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ 1098 ಕರೆ ಮಾಡುವಂತೆ ತಿಳಿಸಿದರು.ಜೆಂಡರ್ ಸ್ಪೆಷಲಿಸ್ಟ್ ಡಿ.ಗೀತಾ ಮಾತನಾಡಿ, ಲಿಂಗ ಸಂವೇದನೆ ಮತ್ತು ಲಿಂಗ ಸಮಾನತೆಯ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ  ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.