ಆ.20ರಂದು ಡಿ.ದೇವರಾಜ ಅರಸು ಜನ್ಮ ದಿನ: ವಿಜೃಂಭಣೆಯ ಆಚರಣೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೩; ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಡಿ. ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ: ಡಿ.ದೇವರಾಜ ಅರಸು ರವರ ದೂರದೃಷ್ಠಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ನಾವು ಸ್ಮರಿಸಬೇಕಿದೆ.  ಈ ಹಿನ್ನಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಜಯಂತಿಯನ್ನು ಆಚರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು  ಸೂಚನೆ ನೀಡಿದರು.