ಮಾದಕ ವಸ್ತುಗಳಿಗೆ ದಾಸರಾದರೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೩; ಮಾದಕ ವಸ್ತುಗಳಿಗೆ ದಾಸರಾದರೆ ಅದರಿಂದ ಹೊರಬರುವುದು ಕಷ್ಟ. ಅವುಗಳಿಂದ ದೂರವಿರುವುದೇ ಒಳಿತು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್  ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,  ಶಿಕ್ಷಣ ಸಚಿವಾಲಯ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ೭೮ ನೇ ಸ್ವಾತಂತ್ಯç ದಿನಾಚರಣೆಯ ಸಂದರ್ಭದಲ್ಲಿ ಮಾದಕ ವ್ಯಸನದಿಂದ ಭಾರತವನ್ನು ಮುಕ್ತಗೊಳಿಸಲು ನಶಾ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಡಯಟ್‌ನಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯುವಕರು ರಾಷ್ಟçದ ಶಕ್ತಿಯಾಗಿದ್ದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಪ್ರಸ್ತುತ ಯುವಜನರು ಹೆಚ್ಚಾಗಿ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ. ಶಾಲಾ ಹಂತದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬೆಳೆಸಬೇಕು. ಇದರಿಂದ ವಿದ್ಯಾರ್ಥಿಗಳು ಭವಿಷ್ಯzಲ್ಲಿ ಉತ್ತಮಜೀವನ ನಡೆಸಲು ಸಾಧ್ಯವಾಗುತ್ತದೆ. ನಶಾ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಶೈಕ್ಷಣಿಕ ಭಾಗೀದಾರರೆಲ್ಲರೂ ದೃಢಸಂಕಲ್ಪ ಮಾಡಬೇಕು ಎಂದು ತಿಳಿಸಿದರು.ಉಪನ್ಯಾಸಕ ಎಸ್.ಬಸವರಾಜು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ಪ್ರಾಚಾರ್ಯ ಅಶ್ವಥ್ ನಾರಾಯಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ತಿಪ್ಪೇಸ್ವಾಮಿ, ಪೂರ್ಣಿಮಾ, ಗಿರಿಜಾ, ಉಪನ್ಯಾಸಕರಾದ ಆರ್.ನಾಗರಾಜು, ಸಿ.ಎಸ್.ಲೀಲಾವತಿ, ಶಿವಲೀಲಾ, ಪದ್ಮ, ರೇವಣ್ಣ, ಅರ್ಜುಮಂದ್ ಬಾನು, ತಾಂತ್ರಿಕ ಸಹಾಯಕರಾದ ಲಿಂಗರಾಜು, ಅವಿನಾಶ್, ಕಚೇರಿ ಅಧೀಕ್ಷಕರಾದ ದೇವೇಂದ್ರಪ್ಪ, ಕವಿತಾ, ಗೀತಾ, ಸಾಂಖಿಕ ಸಹಾಯಕ  ಅಧಿಕಾರಿ ರೂಪಾ, ನಿರ್ವಾಹಕರಾದ ಕ್ಷೀರಾ, ಮಂಜುನಾಥ್, ಶಿವಣ್ಣ, ಚಂದ್ರಶೇಖರ್, ವಿನಯ್, ಪುರುಷೋತ್ತಮ ಮತ್ತಿತರರಿದ್ದರು.
ಫೋಟೋ:೧ .ನಗರದ ಡಯಟ್‌ನಲ್ಲಿ ಸೋಮವಾರ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮತ್ತು ಸಿಬ್ಬಂದಿ ವರ್ಗದವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು