ದೇಶದ ಬೆನ್ನೆಲುಬಾಗಿರುವ ಯುವಕರು ಸತ್ಪ್ರಜೆಗಳಾಗಿ ರೂಪುಗೊಳ್ಳಿ: ನ್ಯಾಯಧೀಶರು ಈಶ್ವರ್ ಸಲಹೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.13-ಯುವಕರು ನಮ್ಮ ದೇಶದ ಬೆನ್ನೆಲುಬಾಗಿದ್ದು. ದೇಶದ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಸಲಹೆ ಮಾಡಿದರು.
ನಗರದ ಜೆ.ಎಸ್.ಎಸ್ ಮಹಿಳಾ ಕಾಲೇಜು ಸಭಾಂಗಣದಲಿಂ್ಲದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಮತ್ತು ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜೆ.ಎಸ್.ಎಸ್ ಮಹಿಳಾ ಕಾಲೇಜು, ರೆಡ್ ರಿಬ್ಬನ್ ಕ್ಲಬ್ ಹಾಗೂ ಯುವ ರೆಡ್ ಕ್ರಾಸ್ ಘಟಕ ಇವರ ಸಂಯುಕ್ತಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್.ಐ.ವಿ, ಏಡ್ಸ್ ಅರಿವಿನ ಮಾಸಾಚರಣೆ 2024ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.
ಯುವಕರನ್ನು ಜಾಗೃತಗೊಳ್ಳಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 12 ರಂದು ಅಂತಾರಾಷ್ಟ್ರೀಯ ಯುವ ದಿನಾಚರಣೆ ಆಚರಿಸಲಾಗುತ್ತಿದೆ. ಸಮಾಜ ಕಟ್ಟುವ ಕಾಯಕಕ್ಕೆ ಯುವಕರು ಭದ್ರ ಬುನಾದಿಯಾಗಿದ್ದಾರೆ. ಇಂದಿನ .ಯುವಕರು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ಶಿಕ್ಷಣ, ಆರೋಗ್ಯ ಹೊಂದಬೇಕು. ಸ್ವಾಮಿ ವಿವೇಕಾನಂದರು ಹೇಳಿರುವಂತೆ ಏಳಿ, ಏದ್ದೇಳಿ, ಗುರಿ ಮಟ್ಟುವ ತನಕ ನಿಲ್ಲದಿರಿ ಎಂಬ ಘೋಷಣೆಯಂತೆ ಯುವಕರು ಗುರಿಯ ಕಡೆ ಛಲದಿಂದ ಮುನ್ನಡೆಯಬೇಕು ಎಂದರು.
ಹೆಚ್.ಐ.ವಿ ಹರಡುವಿಕೆಯಿಂದ ದೇಹದಲ್ಲಿ ರೋಗ ನಿರೋದಕ ಶಕ್ತಿ ಕಡಿಮೆಯಾಗಿ ಅನಾರೋಗ್ಯ ಉಂಟಾಗಲಿದೆ ಹೆಚ್.ಐ.ವಿ ಸೊಂಕಿಂತರನ್ನು ಸಮಾಜದಲ್ಲಿ ಮಾನವಿಯತೆಯಿಂದ ನೋಡಿಕೊಳ್ಳಬೇಕು. ಸಮಾಜದಲ್ಲಿ ಬದುಕುವ ಹಕ್ಕು ಅವರಿಗೂ ಇದ್ದು, ಎಲ್ಲರಂತೆ ಅವರನ್ನು ಸಮಾನವಾಗಿ ಕಾಣಬೇಕು. ಹೆಚ್.ಐ.ವಿ ಸೊಂಕಿತರು ಉತ್ತಮ ಜೀವನ ಶೈಲಿ ಆಳವಡಿಸಿಕೊಳ್ಳಬೇಕು ಎಂದು ನ್ಯಾಯಧೀಶರಾದ ಈಶ್ವರ್ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಚಿದಂಬರ ಅವರು ಯುವಜನಾಂಗಕ್ಕೆ ಎಚ್.ಐ.ವಿ ಏಡ್ಸ್ ಬಗ್ಗೆ ಅರಿವು ಮೂಡಿಸುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್.ಐ.ವಿ ಮತ್ತು ಏಡ್ಸ್ ಬಗೆÉ್ಗ ಯುವಕರು ಸಂಪೂರ್ಣ ಜಾಗೃತರಾಗಿ ಇತರಿಗೂ ಅರಿವು ಮೂಡಿಸುವುದು ಯುವಕರ ಕರ್ತವ್ಯ ಎಂದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳು ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ ಎಸ್ ರವಿಕುಮಾರ್ ಅವರು ಮಾತನಾಡಿ 2000 ರಿಂದ ಪ್ರತಿ ವರ್ಷ ಪ್ರಪಂಚಾದ್ಯಂತ ಅಂತಾರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯುವಕರಿಂದ ಮಾತ್ರ ದೇಶ ಅಭಿವೃದ್ಧಿಯ ಕಡೆ ಸಾಗಲು ಸಾಧ್ಯ ಎಂದರು.
ಜೆ.ಎಸ್.ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಮಹದೇವಸ್ವಾಮಿ ಅವರು ಸ್ವಾಮಿ ವಿವೇಕಾನಂದ ಹಾಗೂ ಅಬ್ದುಲ್ ಕಲಾಂ ರವರ ಆದರ್ಶಗಳನ್ನು ಅನುಸರಿಸಿ ಯುವಕರು ಮುನ್ನಡೆಯಬೇಕು. ಯುವಕರು ರಾಷ್ಟ್ರದ ಸಂಪತ್ತು ಆಗಿದ್ದಾರೆ. ಯುವಕರಿಂದ ರಾಷ್ಟ್ರ ಸದೃಢವಾಗಲಿದೆ. ಸುಸ್ಥಿರ ಅಭಿವೃದ್ಧಿಯ ಕಡೆ ಸಾಗುತ್ತದೆ ಎಂದರು
ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಯುವ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಉಮೇಶ್, ರೆಡ್ ಕ್ರಾಸ್ ಸಂಸ್ಥೆಯ ಸಂಚಾಲಕರಾದ ಮಹೇಶ್, ನೆಹರು ಯುವ ಕೇಂದ್ರದ ಸತೀಶ್ ಪಡುಓಲೆÉ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.