ಆ. 15 ರಂದು ಹೈಕೋರ್ಟ್ ಪೀಠದಲ್ಲಿ ಧ್ವಜಾರೋಹಣ
ಕಲಬುರಗಿ:ಆ.12:ಕಲಬುರಗಿ ಹೊರವಲಯದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ಇದೇ ಆಗಸ್ಟ್ 15 ರಂದು ಬೆಳಿಗ್ಗೆ 9.30 ಗಂಟೆಗೆ ಜರುಗಲಿದೆ ಎಂದು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್‍ರಾದ ಬಸವರಾಜ ಚೇಂಗಟಿ ಅವರು ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಹಿರಿಯ ನ್ಯಾಯಾಧೀಶರು ಧ್ವಜಾರೋಹಣ ನೆರವೇರಿಸುವರು. ಈ ಪೀಠದ ಇತರ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಕಚೇರಿ ಸಿಬ್ಬಂದಿ, ಕಲಬುರಗಿ ವಕೀಲರ ಸಂಘದ ಸದಸ್ಯರು ಹಾಗೂ ಸರ್ಕಾರಿ ನ್ಯಾಯವಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.