ಆ.೧೫ ಸ್ವಾತಂತ್ರ್ಯ ದಿನಾಚರಣೆ, ರಕ್ತದಾನ ಶಿಬಿರ
ರಾಯಚೂರು,ಆ.೧೨- ಪ್ರತಿ ವರ್ಷದಂತೆ ಈ ವರ್ಷವೂ ೭೮ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರಕ್ಕಾಗಿ ಬಲಿದಾನ ಅಮರರಾದವರ ನೆನಪಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಗಸ್ಟ್ ೧೫ ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಲದಕಲ್ ಗೆಳೆಯರ ಬಳಗದ ಸದಸ್ಯ ಬುದ್ದಯ್ಯ ನಾಯಕ ಗಲಗ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಕ್ತದಾನ ಶಿಬಿರವನ್ನು ದೇವದುರ್ಗದ ಜ್ಞಾನವೃಕ್ಷ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆ (ರಿಮ್ಸ್ ) ತಾಲೂಕು ವೈದ್ಯಾಧಿಕಾರಿಗಳ ಕಾರ್ಯಾಲಯ ದೇವದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಮಲದಕಲ್ ಗ್ರಾಮದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ ಸಂಗ್ರಹವಾಗುವ ರಕ್ತವನ್ನು ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡುವ ಸಂಬಂಧ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕೊಡಲಾಗುವುದು ಎಂದು ತಿಳಿಸಿದರು.
೩-೪ ವರ್ಷಗಳಿಂದ ಹಲವು ಉಚಿತ ಆರೋಗ್ಯ ತಪಾಸಣಾ ಶಿಬಿರ, ಸರ್ಕಾರಿ ಶಾಲೆಗಳಿಗೆ ದೇಣಿಗೆ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ, ಗ್ರಾಮೀಣ ಪ್ರದೇಶದಲ್ಲಿ ಮಾದರಿ ಗ್ರಂಥಾಲಯಗಳ ಸ್ಥಾಪನೆ, ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಗಳ ಆಯೋಜನೆ, ಹಸಿರು ದೇವದುರ್ಗದ ಪರಿಕಲ್ಪನೆ, ಉಚಿತ ಟೈಲರಿಂಗ್ ತರಬೇತಿ, ಸ್ಪರ್ಧಾತ್ಮಕ ಪರೀಕ್ಷಾ ವುಸ್ತಕಗಳ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಮತ್ತು ಪುಕ್ಷಣಿಕ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ನವ ಸಮಾಜದ ನಿರ್ಮಾಣಕ್ಕೆ ಸಹಾಯಕ ಪ್ರಾಧ್ಯಾಪಕ ಡಾ. ಮಾರುತಿ ಕುಮಾರ ಮಲದಕಲ್ ರವರ ನೇತೃತ್ವದಲ್ಲಿ ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದರು.
ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ರಕ್ತದಾನ ಮಾಡಬೇಕು. ಹಾಗೂ ರಕ್ತದಾನದ ನೊಂದಣಿಗಾಗಿ ೯೫೩೫೯೫೫೦೩೭, ೯೬೬೩೨೮೦೨೯೩, ೯೫೩೫೦೮೪೪೬೮ ೮೧೦೫೦೪೯೦೫೧, ೯೭೩೧೪೬೮೮೩ ಈ ನಂಬರಗೆ ಸಂಪರ್ಕಿಸಲು ಕೋರಿದರು.
ಈ ಸಂದರ್ಭದಲ್ಲಿ ಸಾಬಣ್ಣ ನಾಯಕ ಮಲ್ಲಿನಾಯಕನದೊಡ್ಡಿ, ಬಾಬು ನದಾಫ್ ಮಲದಕಲ್, ನಾಗಲಿಂಗ ಮಲದಕಲ್, ಬಸವರಾಜ, ವಿಜಯಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.