ಸುಪ್ತ ಪ್ರತಿಭೆ ಹೊರ ಬರಲು ಸ್ಪರ್ಧೆಗಳು ಸಹಕಾರಿ: ಸುಭಾಷ್ ಗುತ್ತೇದಾರ
ಕಲಬುರಗಿ:ಆ.12:ಮನುಷ್ಯರಲ್ಲಿ ಸುಪ್ತವಾಗಿರುವ ಪ್ರತಿಭೆಗಳು ಹೊರಬರಲು ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.
ರವಿವಾರ ಆಳಂದ ಪಟ್ಟಣದ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯ ಆವರಣದಲ್ಲಿ 7ನೇ ಭಾರತೀಯ ಸಂಸ್ಕøತಿ ಉತ್ಸವ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣ ಜಯಂತಿ ಸಮಾರಂಭದ ಅಂಗವಾಗಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲೆ, ಸಾಹಿತ್ಯ, ಸಂಸ್ಕøತಿ ಸಂವರ್ಧಿಸುವ ನಿಟ್ಟಿನಲ್ಲಿ ಬಸವರಾಜ ಪಾಟೀಲ ಸೇಡಂ ಅವರ ನೇತೃತ್ವದಲ್ಲಿ ಕಳೆದ ಐದು ದಶಕಗಳಿಂದ ನಿರಂತರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದಾರೆ ಅವರ ದೂರದೃಷ್ಟಿಯ ಫಲವಾಗಿ ಇಂದು ಈ ಪ್ರದೇಶ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ ಎಂದರು.
ವೇದಿಕೆಯ ಮೇಲೆ ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಬಿ.ಎಡ್ ಕಾಲೇಜು ಪ್ರಾಚಾರ್ಯ ಡಾ. ಅಶೋಕರೆಡ್ಡಿ, ಆಂಗ್ಲ್ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಜ್ಯೋತಿ ವಿಶಾಕ್ ಇದ್ದರು.
ಸ್ಪರ್ಧೆಗಳಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳು ಹಾಗೂ ಭಜನಾ ಮಂಡಳಿಗಳ ಯುವಕ, ಯುವತಿಯರು, ಸರಸಂಬಾ, ಖಜೂರಿ, ಖಂಡಾಳ, ಸಕ್ಕರಗಾ, ಬಂಗರಗಾ, ಜಿಡಗಾ, ಕವಲಗಾ, ಚಿತಲಿ, ಸಾಲೇಗಾಂವ, ಮೋಘಾ ಬಿ, ಮೋಘಾ ಕೆ ಗ್ರಾಮದವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಲ್ಲಿನಾಥ ತುಕ್ಕಾಣೆ, ಮಲ್ಲಿಕಾರ್ಜುನ ಬುಕ್ಕೆ, ರಾಜಕುಮಾರ ಚಿಚಕೋಟೆ, ಶರಣಬಸಪ್ಪ ಶಿರೂರೆ, ಸಿದ್ದಾರಾಮ ಧೋತ್ರೆ, ಶಶಿಕಾಂತ ಭೂಸುಣಗೆ, ಸಂತೋಷ ಕುಲಕರ್ಣಿ, ದತ್ತಾತ್ರೇಯ ಬಿರಾದಾರ ಸೇರಿದಂತೆ ಇತರರು ಇದ್ದರು.