‘ಹರ್ ಘರ್ ತಿರಂಗಾ ಯಶಸ್ವಿಗೊಳಿಸಿ’: ಮರತೂರಕರ್
ಕಲಬುರಗಿ:ಆ.12: ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿರುವಂತೆ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ ನಿಮಿತ್ಯ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ, ಹರ್ ಫರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.