ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದ ಶ್ರಾವಣ ಶನಿವಾರ ವಿಶೇಷ ಪೂಜೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.12- ತಾಲೂಕಿನ ಚಂದಕವಾಡಿ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದಲ್ಲಿ ಮೊದಲನೇ ಶ್ರಾವಣ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತು.್ತ
ದೇವಸ್ಥಾನದಲ್ಲಿ ದೇವರಿಗೆ ಬೆಳಿಗ್ಗೆ ಪಂಚ ದ್ರವ್ಯಗಳ ಅಭಿಷೇಕ ಮಾಡಲಾಯಿತು, ನಂತರ ಶ್ರೀ ಶನೇಶ್ವರ ಸ್ವಾಮಿಯ ಕಥಾ ಕಲಾಕ್ಷೇಪ ನಡೆದು ಸಂಜೆ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸಿದರು.
2ನೇ ಶನಿವಾರ ಸಹ ಭಕ್ತಾಧಿಗಳು ಹೆಚ್ಚಿ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನ ಅಭಿವೃದ್ದಿ ಸಮಿತಿಯ ಸಿ.ಎಲ್. ರಂಗರಾಮು ಮನವಿ ಮಾಡಿದ್ದಾರೆ.