ಚಂದಕವಾಡಿ ಗ್ರಾ.ಪಂ.: ಹೆಚ್ಚುವರಿ ಕ್ರಿಯಾ ಯೋಜನೆ ತಯಾರಿಸಲು ಅನುಮೋದನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.12-ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ 2023-24ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ನಡೆಯಿತು.
ಸಭೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ 99 ಕಾಮಗಾರಿಗಳನ್ನು ಮಂಡಿಸಲಾಯಿತು ಹಾಗೂ 15ನೇ ಹಣಕಾಸು ಯೋಜನೆಯಡಿ ನಡೆದಿರುವ 35 ಕಾಮಗಾರಿಗಳನ್ನು ಮಂಡಿಸಿ ಹೆಚ್ಚುವರಿ ಕ್ರಿಯಾ ಯೋಜನೆ ತೆಯಾರಿಸಲು ಅನುಮೊದನೆ ಪಡೆಯಲಾಯಿತು.
ಸಭೆಯಲ್ಲಿ ನೋಡೆಲ್ ಅಧಿಕಾರಿಗಳಾದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯ ಮ್ಯಾನೇಜರ್ ಸುರೇಶ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ನಟರಾಜು, ಉಪಾಧ್ಯಕ್ಷೆ ರಾಜೇಶ್ವರಿ.ಆರ್, ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಸಿದ್ದರಾಜು ಎಂ, ಕಾರ್ಯದರ್ಶಿ ಮಾದಪ್ಪ, ಲೆಕ್ಕ ಸಹಾಯಕ ರಾಜೇಶ್ ಸೇರಿದಂತೆ ಪಂಚಾಯ್ತಿಯ ಎಲ್ಲಾ ಸದಸ್ಯರು ನೌಕರ ವರ್ಗದವರು ಇದ್ದರು.