ಹಾರಕೂಡ ಶ್ರೀಗಳಿಗೆ ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರಧಾನ
ಬೀದರ್:ಆ.೧೨: ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮAದಿರದಲ್ಲಿ ಹಾರಕೂಡ ಶ್ರೀಗಳ ಪಾವನ ಸಾನಿಧ್ಯದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಕರ್ನಾಟಕ ಸಾಂಸ್ಕೃತಿಕ ರತ್ನ” ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಿತು.
ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರಿಗೆ ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಅಣದೂರಿನ ಪೂಜ್ಯ ಜ್ಞಾನಸಾಗರ ಬಂತೆಜಿ, ಡಾ. ಸುಬ್ಬಣ್ಣ ಕರಕನಹಳ್ಳಿ, ಬಿ.ಕೆ. ಹಿರೇಮಠ, ಮಲ್ಲಿನಾಥ ಹಿರೇಮಠ ಹಾರಕೂಡ, ವಿಜಯಕುಮಾರ ಸೋನಾರೆ, ಡಾ. ವಿಶ್ವನಾಥ ಜಿಪಿ ಮುಂತಾದವರು ಉಪಸ್ಥಿತರಿದ್ದರು.