ರಾಜ್ಯಪಾಲರ ಪ್ರವಾಸ
ಕಲಬುರಗಿ:ಆ.11: ರಾಜ್ಯದ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಆಗಸ್ಟ್ 12 ರಂದು ಬೆಳಿಗ್ಗೆ 9.20 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನೇರವಾಗಿ ಗುಲಬರ್ಗಾ ವಿ.ವಿ. ಅತಿಥಿಗೃಹಕ್ಕೆ ತೆರಳುವರು.
ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ರಾಜ್ಯಪಾಲರು ಬೆಳಿಗ್ಗೆ 10.45 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಲಿರುವ ವಿ.ವಿ.ಯ 42ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 3 ಗಂಟೆ ಕಲಬುರಗಿ‌ ನಗರದ ವಿ.ಟಿ.ಯು. ಪ್ರಾದೇಶಿಕ ಕಚೇರಿಯಲ್ಲಿ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾಯಂಕಾಲ 7.45 ಗಂಟೆಗೆ ಕಲಬುರಗಿ ವಿನಾನ ನಿಲ್ದಾಣದಿಂದ ವಿಮಾನದ‌ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.