ಸ್ವಾತಂತ್ರ್ಯ ಯೋಧರಿಗೆ ಗೌರವ ಸನ್ಮಾನ
ಕಲಬುರಗಿ:ಆ.11: ಎಪ್ಪತ್ತೆಂಟನೇ ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಲಬುರಗಿ ನಗರದಲ್ಲಿನ ಸ್ವಾತಂತ್ರ್ಯ ಯೋಧರ ಮನೆಗೆ ಭೇಟಿ ನೀಡಿ ಅವರ ಕುಟುಂಬದ ಸಮಕ್ಷಮದಲ್ಲಿ ಜಿಲ್ಲಾಡಳಿತ ಪರವಾಗಿ ಸ್ವಾತಂತ್ರ್ಯ ಸೆನಾನಿಗಳಿಗೆ ಗೃಹ ಸನ್ಮಾನ ಮಾಡಿದರು.
ಜಿಲ್ಲಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ತಹಶೀಲ್ದಾರ ಕೆ.ಆನಂದಶೀಲ ಸೇರಿದಂತೆ ಇತರೆ ಅಧಿಕಾರಿಗಳು ಸಾಥ್ ನೀಡಿದರು.
ಕಲಬುರಗಿ ನಗರದ ಗಂಜ್ ಪ್ರದೇಶದ ಸೀತರಾಮ ತಂದೆ ಭೀಮು ನಾಯಕ್ (97) ಮತ್ತು ಜೇವರ್ಗಿ ಕಾಲೋನಿ ನಿವಾಸಿ ರಾಮಾಚಾರಿ‌ ನವಲೆ (97) ಅವರ ಮನೆಗಳಿಗೆ ಭೇಟಿ ನೀಡಿ ಗೌರವ ಪೂರ್ವಕ ಸನ್ಮಾನಿಸಿ ಸ್ವಾತಂತ್ರ್ಯ ಹೋರಾಟದ ಕಿಚ್ಚಿನ ಬಗ್ಗೆ ಮಾಹಿತಿ ಪಡೆದಿದ್ದಲ್ಲದೆ ಅವರ ಕುಶಲೋಪರಿ ವಿಚಾರಿಸಿದರು. ಅಲ್ಲದೆ ಕುಟುಂಬ ಸದಸ್ಯರ ಜೊತೆ ಸೆಲ್ಫಿಗೆ ಪೋಸ್ ಸಹ ನೀಡಿದರು.