ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ; ನಾಲ್ವರು ಸಾವು, ಒಬ್ಬರು ಗಂಭೀರ
ಕಾರ್ಕಳ-ಈಚರ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಒಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾರ್ಕಳದ ಪಾಜಿಗುಡ್ಡೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ಗಂಡಸು ಹಾಗೂ ಮತ್ತೋರ್ವರು ಸೇರಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಘಟನೆಯಲ್ಲಿ ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್‌ನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.