ಬಿ.ರಾಚಯ್ಯ ಅವರು ಶೋಷಿತರ ಪರ ಕಾಳಜಿ ಹೊಂದಿದ್ದರು: ಸಿದ್ಧರಾಮಯ್ಯ
ಸಂಜೆವಾಣಿ ವಾರ್ತೆ
ಚಾಮರಾಜನಗರ ಆ.11- ಮಾಜಿ ರಾಜ್ಯ ಪಾಲರಾದ ದಿ.ಬಿರಾಚಯ್ಯ ಅವರು ಬಡವರು ಶೋಷಿತರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು.ಅವರ ಮಾರ್ಗ ದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಚಾಮರಾಜನಗರತಾಲೂಕಿನ ಆಲೂರಿನಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ರಾಜ್ಯಪಾಲರಾದ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು. ರಾಚಯ್ಯಅವರುರಾಜ್ಯರಾಜಕಾರಣದಅತ್ಯಂತ ಮುತ್ಸದ್ದಿರಾಜಕಾರಣಿ. ಅವರು ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.
ರಾಮಕೃಷ್ಣ ಹೆಗಡೆಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆಕರೆದು ಬೆಳೆಸುವ ಗುಣಇತ್ತು. ಹೆಗಡೆ ಮತ್ತುರಾಚಯ್ಯಅವರು ನನ್ನನ್ನುಕರೆದುಕನ್ನಡ ಕಾವಲು ಸಮಿತಿಯಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರುಎಂದು ಸ್ಮರಿಸಿಕೊಂಡರು.
ರಾಚಯ್ಯನವರು ನಡೆದಂತ ಅವರದಾರಿಯಲ್ಲೇ ನಡೆಯಪ್ಪಾಎಂದುಅವರ ಪುತ್ರ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು ಎಂದರು.
ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.
ರಾಚಯ್ಯರವರ ಸ್ಮಾರಕದಲ್ಲಿ ಐಎಎಸ್,ಕೆ.ಎ.ಎಸ್.ನಂತಹ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ರಾಚಯ್ಯ ಅವರ ಪತ್ನಿಗೌರಮ್ಮ, ಸಂಸದಸುನಿಲ್ ಬೋಸ್, ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಉಗ್ರಾಣ ನಿಗಮದ ಅಧ್ಯಕ್ಷಎಸ್.ಜಯಣ್ಣ, ಗ್ಯಾರಂಟಿ ಯೋಜನೆಗಳ ಅನುμÁ್ಢನದ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು ಇನ್ನಿತರರು ಉಪಸ್ಥಿತರಿದ್ದರು. ಆರಂಭದಲ್ಲಿ ಡಾ.ಬಿ.ರಾಚಯ್ಯ ಅವರ ಜೀವನ ಸಾಧನೆ ಕುರಿತು ಛಾಯ ಚಿತ್ರ ಪ್ರದರ್ಶನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.