ಭರಚುಕ್ಕಿ ಜಲಪಾತೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.11- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿ ಪಡಿಸಲು ಸರ್ಕಾರ ಅಗತ್ಯ ಎಲ್ಲ ನೆರವನ್ನೂ ನೀಡಲಿದೆ. ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು ಎಂದರು.
ಬಿಳಿಗಿರಿ ರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕವಾಗಿ ವೇಗದ ಪ್ರಗತಿಕಾಣಿಸಲುಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೇರಳ ಅವಕಾಶವಿದೆ. ಪ್ರವಾಸೋದ್ಯಮಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು ಎಲ್ಲ ಉತ್ತೇಜನ ನೆರವು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರು ಮಾತನಾಡಿ ಜಿಲ್ಲೆಯಲ್ಲಿ ಉತ್ತಮ ಪ್ರವಾಸಿತಾಣಗಳಿದ್ದು ನಿಸರ್ಗದ ವರದಾನವಿದ್ದು ಮೂಲಸೌಕರ್ಯಗಳನ್ನು ಒದಗಿಸಿದಲ್ಲಿ ಉತ್ತಮ ಪ್ರವಾಸಿ ತಾಣ ಜಿಲ್ಲೆಯನ್ನಾಗಿಸಬಹುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಮಾತನಾಡಿ ಚೆಲುವ ಚಾಮರಾಜನರ ಶೀರ್ಷಿಕೆ ಅದ್ಬುತವಾಗಿದೆ.ವಿಶೇಷವಾಗಿ ಜಿಲ್ಲೆ ಜನಪದ ಕಲೆಗಳಿಂದ ಸಮೃದ್ದವಾಗಿದೆ ಎಂದರು.
ಪಶು ಸಂಗೋಪನೆ, ರೇμÉ್ಕಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಮಾತನಾಡಿ ಪ್ರಕೃತಿಯಿಂದ ಕೂಡಿದ ಚಾಮರಾಜನಗರ ಜಿಲ್ಲೆಗೆ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ.ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಜಲಪಾತೋತ್ಸವ ಪ್ರವಾಸೋದ್ಯಮಉತ್ತೇಜನಕ್ಕೆ ಅನುಕೂಲವಾಗಲಿದೆ ಎಂದರು.
ಹನೂರು ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.ಲೋಕಸಭಾ ಸದಸ್ಯ ಸುನೀಲ್ ಬೋಸ್, ಶಾಸಕ ಮತ್ತುಎಂ.ಎಸ್.ಐ.ಎಲ್.ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಗಣೇಶ್ ಪ್ರಸಾದ್, ಡಾ.ಡಿ.ತಿಮ್ಮಯ್ಯ,ಕಾಡಾಅಧ್ಯಕ್ಷ ಪಿ.ಮರಿಸ್ವಾಮಿ,ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷಎಸ್.ಜಯಣ್ಣ, ಗ್ಯಾರಂಟಿ ಯೋಜನೆಗಳ ಅನುμÁ್ಠನದ ಜಿಲ್ಲಾ ಅಧ್ಯಕ್ಷಎಚ್.ವಿ.ಚಂದ್ರು,ಸತ್ತೇಗಾಲ ಗ್ರಾಮ ಪಂಚಾಯತ್‍ಅಧ್ಯಕ್ಷಕೆಂಪರಾಜು,ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ,ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್,ಮಂಡ್ಯ ಜಿಲ್ಲಾಧಿಕಾರಿ ಎ.ಎಸ್.ಕುಮಾರ,ಚಾಮರಾಜನಗರಜಿಲ್ಲಾ ಪಂಚಾಯತ್‍ಕಾರ್ಯನಿರ್ವಾಹಧಿಕಾರಿ ಮೋನಾ ರೋತ್,ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಡಾ.ಬಿ.ಟಿ.ಕವಿತಾ,ಮಂಡ್ಯಜಿಲ್ಲಾ ಪೆÇಲೀಸ್ ವರಿμÁ್ಢಧಿಕಾರಿ ಮಲ್ಲಿಕಾರ್ಜುನ,ಚಾಮರಾಜನಗರ ಹೆಚ್ಚುವರಿಜಿಲ್ಲಾಧಿಕಾರಿಗೀತಾ ಹುಡೇದಇನ್ನಿತರರು ಉಪಸ್ಥಿತರಿದ್ದರು.