ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆ: ಯತ್ನಾಳ ಸ್ವಾಗತ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೧೧: ಸರ್ಕಾರಿ ಹಾಗೂ ಅಮಾಯಕರ ಆಸ್ತಿಗಳನ್ನು ಕಬಳಿಸುವ ಸಾಧನವಾಗಿ ಮಾರ್ಪಟ್ಟಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಾಗತಿಸಿದ್ದಾರೆ.
ವಕ್ಫ್ ಮಂಡಳಿಗಳು ಮತ್ತು ವಕ್ಫ್ ಆಸ್ತಿಗಳಿಗೆ ಅನಿಯಂತ್ರಿತ ಅಧಿಕಾರಕ್ಕೆ ಮಿತಿಯನ್ನು ತರುವ ನಿಟ್ಟಿನಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ ಅತ್ಯವಶ್ಯವಾಗಿತ್ತು. ಈ ಅಸಾಂವಿಧಾನಿಕ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ೨೦೨೩ರ ಆಗಸ್ಟ್ನಲ್ಲಿ ಪತ್ರ ಬರೆದಿದ್ದೆ. ಗುರುವಾರ ವಕ್ಫ್ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜುಜ್ ಅವರು ಲೋಕಸಭೆಯಲ್ಲಿ ಮಂಡಿಸಿರುವುದು ಸ್ವಾಗತಾರ್ಹ ನಿರ್ಣಯವಾಗಿದೆ ಎಂದಿದ್ದಾರೆ.
ಈ ಮಸೂದೆ ಅಂಗಿಕಾರಗೊAಡರೆ, ವಕ್ಫ್ ಮಂಡಳಿ ಮನಸ್ಸಿಗೆ ಬಂದAತೆ ತಮಗೆ ಬೇಕಾದ ಆಸ್ತಿಗಳನ್ನು ಕಬಳಿಸುವ ಹುನ್ನಾರ ತಪ್ಪಿಸಬಹುದು. ಅಕ್ರಮವಾಗಿ ಆಸ್ತಿಗಳನ್ನು ತಮ್ಮದೆಂದು ಆದೇಶ ಹೊರಡಿಸುವುದನ್ನು ಪ್ರಶ್ನಿಸಲು ಅವಕಾಶ ದೊರೆಯುತ್ತದೆ. ಇದರಿಂದ ಅಮಾಯಕರಿಗೆ ಹಾಗೂ ಸರ್ಕಾರಕ್ಕೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.