ಅ. ೩ ರಿಂದ ೧೪ ರವರೆಗೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ವೈಭವ
ಮಂಗಳೂರು ದಸರಾ ಪ್ರಯುಕ್ತ ಅಕ್ಟೋಬರ್ ೬ ರಂದು ಹಾಫ್ ಮ್ಯಾರಥಾನ್ ನಡೆಯಲಿದೆ. ಕಳೆದ ವರ್ಷ ವಾಕಥಾನ್ ಆಯೋಜಿಸಿದ್ದರೆ, ಈ ಬಾರಿ ೨೧ ಕಿಮೀ ಹಾಫ್ ಮ್ಯಾರಥಾನ್ ನಡೆಯಲಿದ್ದು, ೨೦೦೦ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಅಕ್ಟೋಬರ್ ೧೩ ರಂದು ಭವ್ಯ ಮೆರವಣಿಗೆ ನಡೆಯಲಿದ್ದು, ದಸರಾ ಸಂಭ್ರಮದಲ್ಲಿ ನಗರವು ಬಣ್ಣ ಬಣ್ಣದ ದೀಪಗಳಿಂದ ಸುಂದರವಾಗಿ ಕಂಗೊಳಿಸಲಿದೆ. ಮಂಗಳೂರು ದಸರಾದಲ್ಲಿ ಹಲವು ಗಣ್ಯರು ಆಗಮಿಸುವ ನಿರೀಕ್ಷೆ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ, ಕುದ್ರೋಳಿ ದೇವಸ್ಥಾನದ ಖಜಾಂಚಿ ಪದ್ಮರಾಜ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿ ರವಿಶಂಕರ್ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.