ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಬೇಡಿ
ಕಲಬುರಗಿ,ಆ.10-ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತ, ಎಂ.ಜಿ.ರೋಡ್, ಆದರ್ಶ ಕಲ್ಯಾಣ ಮಂಟಪ ಎದರುಗಡೆ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಕೂಡದು ಎಂದು ಈ ಬಡಾವಣೆಗಳ ನಾಗರಿಕರು ಮನವಿ ಮಾಡಿದ್ದಾರೆ.
ಈ ಸಂಬಂಧ ಬಡಾವಣೆಯ ನಾಗರಿಕರು ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದ್ದು, ಈ ಪ್ರದೇಶದಲ್ಲಿ ಸಾಯಿ ಮಂದಿರ, ಹನುಮಾನ ದೇವಾಲಯ, ಮಜ್ಜೀದ್, ದೊಡ್ಡ ದೊಡ್ಡ ಆಸ್ಪತ್ರೆಗಳು, ಶಾಲಾ-ಕಾಲೇಜುಗಳಿದ್ದು, ಈ ಪ್ರದೇಶದಲ್ಲಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡುವುದು ಸರಿಯಲ್ಲ. ಉತ್ತಮ ಧಾರ್ಮಿಕ, ಸಾಮಾಜಿಕ ಸಾಮರಸ್ಯದಿಂದ ಕೂಡಿರುವ ಈ ಪ್ರದೇಶದಲ್ಲಿ ಮದ್ಯದಂಗಡಿ ತೆರೆದರೆ ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾಗುವ ಅಪಾಯವಿದೆ. ಆದ್ದರಿಂದ ಈ ಪ್ರದೇಶದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ನಾಗರಿಕರು ಮನವಿಪತ್ರದಲ್ಲಿ ಆಗ್ರಹಿಸಿದ್ದಾರೆ.