ಶರಣರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಎಂಎಲ್ಸಿ ಸುನೀಲಗೌಡ ಪಾಟೀಲ
ವಿಜಯಪುರ,ಆ.10:ಶರಣರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯÀ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶುಕ್ರವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ಗುಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ. ಶ್ರಾವಣ ಮಾಸ ಪ್ರಾರಂಭವಾದಾಗ ಕೆಲವರು ತಮ್ಮ ಆಚಾರ, ವಿಚಾರಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಈ ನಡವಳಿಕೆ ಕೇವಲ ಶ್ರಾವಣ ಮಾಸಕ್ಕೆ ಸೀಮಿತವಾಗದೇ, ಜೀವನದುದ್ದಕ್ಕೂ ಪಾಲಿಸುವ ಮೂಲಕ ಶರಣರ ಆಶಯದಂತೆ ಜೀವನ ಸಾಗಿಸಬೇಕು ಎಂದು ಅವರುಹೇಳಿದರು.
ಇದಕ್ಕೂ ಮೊದಲು ಮದಗುಣಕಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳಲಾಗಿರುವ ರೂ. 25 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಭೂಮಿಪೂಜೆ, ಪಿ.ಆರ್.ಇಡಿ ವತಿಯಿಂದರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಅವರು, ಅಂಗನವಾಡಿ ಸಿಬ್ಬಂದಿ ಮತ್ತು ಅಧಿಕಾರಿಗಳು ಮಕ್ಕಳ ಶಿಕ್ಷಣದ ಜೊತೆಗೆ ಹಿತ ರಕ್ಷಣೆಗೆ ಆದ್ಯತೆ ನೀಡಬೇಕು. ಗುಣಮಟ್ಟದ ಆಹಾರ ಪೂರೈಕೆ ಮತ್ತು ಶುಚಿತ್ವದ ಕಡೆಗೆ ಗಮನ ನೀಡಬೇಕು. ಅಲ್ಲದೇ, ಮಕ್ಕಳ ರಕ್ಷಣೆಗೆ ಬೇಕಾಗಿರುವ ಅಗತ್ಯ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರೇಮಠದ ಶ್ರೀ ಮಹಾದೇವ ಸ್ವಾಮಿಗಳು ಹಿರೇಮಠ, ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರಗೇಂದ್ರ ಸ್ವಾಮಿಗಳು, ಗಿರಿಸಾಗರಕಲ್ಯಾಣ ಹಿರೇಮಠದ ಶ್ರೀ ರುದ್ರಮುನಿ ಶಿವಾಚಾರ್ಯರು, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ, ಮುಖಂಡರಾದ ಈರಗೊಂಡ ಬಿರಾದಾರ, ಬಸವರಾಜ ದೇಸಾಯಿ, ಮುತ್ತಪ್ಪ ಶಿವಣ್ಣವರ, ಅಪ್ಪುಗೌಡ ಪಾಟೀಲ ಶೇಗುಣಸಿ, ಕಿಟ್ಟು ಕುಲಕರ್ಣಿ, ಕವಿತಾ ಮಠಪತಿ, ಮಲ್ಲಿಕಾರ್ಜುನ ಗಂಗೂರ, ಶಿವನಗೌಡ ಬಿರಾದಾರ, ಬಸಪ್ಪ ಭಾವಿಕಟ್ಟಿ, ಸಂಗಮೇಶ ಬಿರಾದಾರ, ಬಿ.ಬಿ. ಪಾಟೀಲ ಶೇಗುಣಸಿ, ಡಾ. ಕೌಸರ್‍ಅತ್ತಾರ, ಶಂಕ್ರೆಪ್ಪ ಬಿರಾದಾರ ಹೊಸೂರ, ಎಚ್.ಬಿ. ಹರನಟ್ಟಿ, ಜಿ.ಬಿ. ಹರನಟ್ಟಿ, ಅಧಿಕಾರಿಗಳಾದ ಕೆ.ಕೆ. ಚವ್ಹಾಣ, ಅನೀಲ ಹಳ್ಳಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.