ಶ್ರೀ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ,ಆ.10 :ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಗಸ್ಟ್ 19 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ, ಆ.20ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆಗಸ್ಟ್ 26 ರಂದು ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಕ್ಕೆ ಕೈಗೊಳ್ಳಲಾಯಿತು.
ಆಗಸ್ಟ್ 19 ರಂದು ನುಲಿಯ ಚಂದಯ್ಯ ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಶ್ರೀ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ಹಾಗೂ 10-30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ಆ.20ರಂದು ಸಂಜೆ 4 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರ ಮೆರವಣಿಗೆ ಹಾಗೂ ಸಂಜೆ 5 ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಶ್ರೀ ಕೃಷ್ಣ ಜಯಂತಿ
ಆಗಸ್ಟ್ 26 ರಂದು ಶ್ರೀ ಕೃಷ್ಣ ಜಯಂತಿ ಅಂಗವಾಗಿ ಬೆಳಗ್ಗೆ 9:30ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ 10:30 ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಈ ಮಹನೀಯರ ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿμÁ್ಟಚಾರದಂತೆ ಆಮಂತ್ರಣ ಪತ್ರಿಕೆ, ವಿವಿಧ ಗಣ್ಯರಿಗೆ ಆಹ್ವಾನ, ಮೆರವಣಿಗೆ, ಕಲಾ ತಂಡಗಳ ವ್ಯವಸ್ಥೆ, ಮಹನೀಯರ ಆದರ್ಶ ವಿಚಾರಗಳ ಕುರಿತಾಗಿ ಉಪನ್ಯಾಸ, ದೀಪಾಲಂಕಾರ ಸೇರಿದಂತೆ ವೇದಿಕೆ ಕಾರ್ಯಕ್ರಮದ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಸಂತೋಷ ಭೋವಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಅಡಿವೆಪ್ಪ ಸಾಲಗಲ್, ಶ್ರೀನಿವಾಸ ಬೆಟಿಗೇರಿ, ಕೆ.ಎಚ್. ಭಜಂತ್ರಿ, ಗುರು ಕನ್ನೂರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ವಿದ್ಯಾವತಿ ಅಂಕಲಗಿ, ದೇವೇಂದ್ರ ಮೀರೆಕರ್, ಸದಾಶಿವ, ಬಸವರಾಜ, ನರಸಪ್ಪ ಭಜಂತ್ರಿ, ಪ್ರಭಾಕರ ಈಳಗೇರ, ಎಂ.ಜಿ. ಯಂಕಂಚಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.