ವಾಕಥಾನ್ ಯಶಸ್ವಿಗೆ ಎಲ್ಲರೂ ಸಹಕಾರನೀಡಬೇಕು:ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ
ಬೀದರ, ಆ. 10:ಆಗಸ್ಟ್. 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೀದರ ಜಿಲ್ಲಾಡಳಿತದ ವತಿಯಿಂದ ಬೀದರ ನಗರದಲ್ಲಿ ಆಗಸ್ಟ್ 13 ರಂದು ರಾಷ್ಟ್ರೀಯ ಏಕತಾ ನಡಿಗೆ (ವಾಕಥಾನ) ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಇದರ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಾಕಥಾನ್ ಅಂಗವಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಆಗಸ್ಟ್ 13 ರಂದು ಬೆಳಿಗ್ಗೆ 7 ಗಂಟೆಗೆ ಬೀದರ ಕೋಟೆಯಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ರಾಷ್ಟ್ರೀಯ ಏಕತಾ ನಡಿಗೆ ( ವಾಕಥಾನ್ ) ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಬೀದರ ನಗರದ ವಿವಿಧ ಶಾಲಾ- ಕಾಲೇಜುಗಳ ವಿಧ್ಯಾರ್ಥಿಗಳು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಜ್ಞಾನ ಸುಧಾ, ಗುರುನಾಕ ಕಾಲೇಜು, ಶಾಹೀನ್ ಕಾಲೇಜು, ಬಿ.ವಿ.ಬಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.
ಆಗಸ್ಟ್. 13 ರಂದು ಬೆಳಿಗ್ಗೆ 7 ಗಂಟೆಗೆ ವಾಕಥಾನ್ ಕಾರ್ಯಕ್ರಮ ಇರುವುದರಿಂದ ಮುಂಚಿತವಾಗಿ 6:30 ಗಂಟೆಗೆ ಮಕ್ಕಳನ್ನು ಬೀದರ ಕೋಟೆಗೆ ಕರೆ ತರಬೇಕು. ವಾಕಥಾನ್ ಬೀದರ ಕೋಟೆಯಿಂದ ಆರಂಭವಾಗಿ ಮಹ್ಮದ್ ಗವಾನ ಮದರಸಾ. ಅಂಬೇಡ್ಕರ್ ವೃತ್ತ. ಶಿವಾಜಿ ವೃತ್ತ ಹಾಗೂ ಹರಳಯ್ಯ ವೃತ್ತದ ಮಾರ್ಗವಾಗಿ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ನಡೆಯಲಿದೆ. ಶಾಲಾ ವಾಹನಗಳಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕರೆತಂದು ಮತ್ತೆ ತಮ್ಮ ಕಾಲೇಜುಗಳಿಗೆ ಅವರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಆಯಾ ಕಾಲೇಜಿನ ಶಿಕ್ಷಕರದಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಮಹೇಶ ಮೆಘಣ್ಣವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾಂತ ಶಾಬಾದಕರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೆಶಕರಾದ ಸುರೇಖಾ, ನೌಕರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಂದ್ರಕುಮಾರ್ ಗಂಧಗೆ, ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ ಸುವರ್ಣ, ವಿರೂಪಾಕ್ಷ ಗಾದಗಿ, ಶಿವಶಂಕರ ಟೋಕರೆ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.