ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ
ಬಾಗಲಕೋಟ,ಆ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಬಾಗಲಕೊಟೆ ಇವರ ವತಿಯಿಂದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಜರುಗಿಸಲಾಯಿತು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮಾತಾನಾಡಿದ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಮ್ ರವರು ಸುಜ್ಞಾನನಿಧಿ ಶಿಷ್ಯವೇತನ ವಿದ್ಯಾರ್ಥಿಗಳ ಪಾಲಿಗೆ ಆಶಾ ಕಿರಣವಾಗಿದ್ದು, ಈ ಯೋಜನೆ ನೆರವಿನೊಂದಿಗೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕು ಎಂದು ಕರೆ ನೀಡಿ ಇದರ ಪ್ರಯೋಜನ ಪಡೆದವರು ಮುಂದೆ ತಾವು ಇಂತಹ ಸಹಾಯಕ್ಕೆ ಕೈ ಜೊಡಿಸಬೆಕೆಂದು ಕರೆ ನಿಡಿದರು
ಶ್ರೀ ಕ್ಷೇತ್ರದಿಂದ ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮವು ಒಂದು ಉತ್ತಮ ಕಾರ್ಯವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡುವಲ್ಲಿ ಮಹತ್ವದ ಪಾತ್ರವಹಿಸಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜೀವನದಲ್ಲಿ ಉತ್ತಮ ಸಾಧನೆ ಮಾಡುವುದರ ಜೊತೆಗೆ ಶ್ರೀ ಕ್ಷೇತ್ರದ ಮಹತ್ತರವಾದ ಈ ಯೋಜನೆ ಸದ್ಭಳಕೆಯಾಗಬೇಕು ಎಂದು ತಿಳಿಸಿದರು.
ನಂತರ 64 ವಿದ್ಯಾರ್ಥಿಗಳಿಗೆ ಸುಜ್ಞಾನಿಧಿ ಶಿಷ್ಯವೇತನ ಮಂಜೂರಾತಿ ಪತ್ರ, ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ ಕಟ್ಟಡಕ್ಕೆ ರೂ 2.50 ಲಕ್ಷ ಮಂಜೂರಾತಿ ವಪತ್ರ, ಸಾಲ ಪಡೆದು ಮರಣ ಹೊಂದಿದ ನಾಮಿನಿಯವರಿಗೆ Pಖಏ ಕ್ಲೇಮ್ 4.12 ಲಕ್ಷ, 03 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ನೀಡಿದರು.
ಮುಖ್ಯ ಅತಿಥಿಗಳಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಶಶಿಧರ ಕುರೇರ ರವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಎಲ್ಲ ವರ್ಗದ ಜನರಿಗೂ ಸಹಕಾರಿಯಾಗಿದೆ. ಸುಜ್ಞಾನನಿಧಿ ಶಿಷ್ಯವೇತನ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಹಾಗೂ ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಬದಲಾವಣೆಯ ಸಾಧ್ಯ, ಸಂಘದ ಸದಸ್ಯರ ಮಕ್ಕಳಿಗೆ ಉತ್ತಮ ಭವಿಷ್ಯಕ್ಕಾಗಿ ಸುಜ್ಞಾನಿಧಿ ಶಿಷ್ಯವೇತನ ಸಹಾಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಾದೇಶಿಕ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಪ್ರಾದೇಶಿಕ ಕಚೇರಿ ಕೊಪ್ಪಳ ಚಂದ್ರಶೇಖರ್ ಜೆ ರವರು ಯೋಜನೆಯ ಕಾರ್ಯಕ್ರಮಗಳಲ್ಲಿ ಒಂದಾದ ಸುಜ್ಞಾನನಿಧಿ ಶಿಷ್ಯ ವೇತನದ ಕುರಿತು ಸವಿವರವಾದ ಮಾಹಿತಿಯನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ ಶ್ರೀ ರವೀಂದ್ರ ಒಂದುಕುದರಿ ನಿಕಟ ಪೂರ್ವ ಅಧ್ಯಕ್ಷರು ಅಖಿಲ ಕರ್ನಾಟಕ ಜಿಲ್ಲಾ ಜನಜಾತಿ ವೇದಿಕೆ ಟ್ರಸ್ಟ್ (ರಿ) ಬಾಗಲಕೋಟ ರವರು ಕಾರ್ಯಕ್ರಮಕ್ಕೆ ಶುಭ ಕೋರಿದರು.