ಆರೋಗ್ಯ ಸಂವರ್ಧನೆಗೆ ಕ್ರೀಡೆ ಸಂಜೀವಿನಿ: ವಿಜಯರಾಮೇಗೌಡ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಆ.10: ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಂವರ್ಧನೆಗೆ ಕ್ರೀಡೆಯು ಸಂಜೀವಿನಿಯಾಗಿದೆ ಎಂದು ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಮಿತ್ರ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ವಿಜಯ್ ರಾಮೇಗೌಡ ಅಭಿಪ್ರಾಯಪಟ್ಟರು.
ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳು ಹಾಗೂ ಯುವಜನರು ಪಠ್ಯ ಚಟುವಟಿಕೆಗಳಿಗೆ ನೀಡುವಷ್ಟೇ ಮಹತ್ವ ಹಾಗೂ ಆದ್ಯತೆಯನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ನೀಡಬೇಕು. ಆರೋಗ್ಯವಂತ ಮನಸ್ಸು ಹಾಗೂ ದೇಹಕ್ಕೆ ಕ್ರೀಡೆಯು ವರವಾಗಿರುವುದರಿಂದ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸರ್ವ ಶ್ರೇಷ್ಠ ಕ್ರೀಡಾಪಟುಗಳಾಗಿ ಅತ್ಯುತ್ತಮವಾದ ಸಾಧನೆ ಮಾಡಿ ತಮ್ಮ ತಂದೆತಾಯಿಗಳಿಗೆ, ಗುರುಹಿರಿಯರಿಗೆ ಹಾಗೂ ನಮ್ಮ ದೇಶಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದ ವಿಜಯ್ ರಾಮೇಗೌಡ ಕ್ರೀಡಾಪಟುಗಳಿಗೆ ದೇಶ ವಿದೇಶಗಳಲ್ಲಿ ಉತ್ತಮ ಅವಕಾಶಗಳಿವೆ. ಭಾರತ ಪ್ರಗತಿಪಥದಲ್ಲಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂದರು. ಕ್ರಿಕೆಟ್ ಹೊರತುಪಡಿಸಿ ಇತರ ಕ್ರೀಡೆಗಳಿಗೆ ಸೂಕ್ತ ಪೆÇ್ರೀತ್ಸಾಹ ಹಾಗೂ ಮಾರ್ಗದರ್ಶನದ ಕೊರತೆಯಿದೆ.
ಗ್ರಾಮೀಣ ಪ್ರದೇಶದಲ್ಲಿ ಹಲವು ಪ್ರತಿಭಾವಂತರಿದ್ದರೂ ಅವರನ್ನು ಗುರುತಿಸಿ ಬೆಳಕಿಗೆ ತರುವ ವಾತಾವರಣ ದೇಶದಲ್ಲಿ ಇಲ್ಲ. ಶಾಲಾ ಹಂತದಲ್ಲಿಯೇ ಉತ್ತಮ ಕ್ರೀಡಾಪಟುಗಳನ್ನು ಗುರುತಿಸುವ ಕೆಲಸ ಆಗಬೇಕು. ಪ್ರತಿಯೊಂದು ಶಾಲೆಯಲ್ಲಿಯೂ ಕಡ್ಡಾಯವಾಗಿ ದೈಹಿಕ ಶಿಕ್ಷಕರ ನೇಮಕವಾಗಬೇಕೆಂದು ವಿಜಯ ರಾಮೇಗೌಡ ಹೇಳಿದರು.
ಸಮಾಜಸೇವಕ ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ
ಕ್ರೀಡಾ ಚಟುವಟಿಕೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾದ ಪ್ರಕ್ರಿಯೆಯಾಗಿದೆ. ಸೋಲಿಗೆ ಹೆದರಿ ಪಲಾಯನ ವಾದವನ್ನು ಅನುಸರಿಸದೆ ಸೋಲನ್ನೇ ಗೆಲುವನ್ನಾಗಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಮಲ್ಲಿಕಾರ್ಜುನ ಶಿಸ್ತು, ವಿನಯವಂತಿಕೆಯನ್ನು ಮೈಗೂಡಿಸಿಕೊಂಡು ಪಾಠದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ಸಮರ್ಪಣೆ ಮಾಡಿಕೊಂಡು ಸರ್ವ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ತಾಲೂಕು ಕ್ರೀಡಾ ಸಂಯೋಜಕರಾದ ಪ್ರಭುಕುಮಾರ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಪುಟ್ಟರಾಜು, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ರವಿಕುಮಾರ್ ಸೇರಿದಂತೆ ಬೂಕನಕೆರೆ ಹೋಬಳಿಯ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು ಹಾಗೂ ಮಕ್ಕಳ ಪೆÇೀಷಕರು ಹಾಗೂ ಕ್ರೀಡಾ ಪ್ರೇಮಿಗಳು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.