ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮ
ಕಲಬುರಗಿ:ಸೆ.30:ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಭಾರತ ಸೇವಾದಳ ಜಿಲ್ಲಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ “ಮಹಾತ್ಮ ಗಾಂಧೀಜಿಯರವರ 155ನೇ ಜಯಂತಿ” ಅಂಗವಾಗಿ ಗಾಂಧೀಜಿಯವರ ತತ್ವ-ಸಂದೇಶ ಕುರಿತು ವಿಶೇಷ ಉಪನ್ಯಾಸ, ಪ್ರಬಂಧ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ ವಿತರಣೆ ಹಾಗೂ ಸರ್ವಧರ್ಮ ಪ್ರಾರ್ಥನೆ-ಸದ್ಭಾವನಾ ಗೀತಗಾಯನ ಕಾರ್ಯಕ್ರಮವನ್ನು ಅಕ್ಟೋಬರ್ 2 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಶೈಲಂ ಸಾರಂಗಮಠದ ಪೂಜ್ಯ ಡಾ. ಸಾರಂಗಧರ ದೇಶಿಕೇಂದ್ರದ ಮಹಾಸ್ವಾಮಿಗಳು, ಕಲಬುರಗಿಯ ಮೌಲಾನಾ ಸೈಯದ್ ಖಾಸಿಂ ಬುಖಾರಿ ಖಾದ್ರಿ, ಸಿದ್ದಾರ್ಥ ವಿಹಾರದ ಪೂಜ್ಯ ಶ್ರೀ ಸಂಗಾನಂದ ಭಂತೇಜಿ, ಸಂತ ಮೇರಿ ಚರ್ಚ್‍ನ ಫಾದರ್ ಜೋಸೆಫ್ ಪ್ರವೀಣ್ ಹಾಗೂ ಮಳಖೇಡ 1008 ಶ್ರೀ ಮಲ್ಲಿನಾಥ ದಿಗಂಬರ ಜೈನ್ ಮಂದಿರದ ಕಾರ್ಯದರ್ಶಿ ದೀಪಕ್ ಪಂಡಿತ್ ಹಾಗೂ ಕಲಬುರಗಿ ಶ್ರೀ ಗುರುನಾನಕ್ ಮಠದ ಭಾಯ್‍ದೀಪ್ ಸಿಂಗ್ (ಗ್ರಂಥಿ) ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸುವರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಗಳ ಸಲಹೆಗಾರರು (ನೀತಿ ಮತ್ತು ಕಾರ್ಯಕ್ರಮ) ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತೀಮಾ ಅವರು ಗೌರವ ಉಪಸ್ಥಿತಿ ವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಮಹಾಪೌರರಾದ ಯಲ್ಲಪ್ಪ ಎಸ್. ನಾಯಕೋಡಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕಲಬುರಗಿ ಅಚ್ಟುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ್ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಕಲಬುರಗಿ ಸಂತ ಜೋಸೆಫ್ ಪಿ.ಯು. ಕಾಲೇಜಿನ ಪ್ರಾಂಶುಪಾಲ ಡಾ. ಚಿ.ಸಿ. ನಿಂಗಣ್ಣ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಸಂಗೀತ ಕಲಾವಿದರಾದ ದತ್ತರಾಜ ಕಲಶೆಟ್ಟಿ ಹಾಗೂ ತಂಡದಿಂದ ಗಾಂಧಿ ಪ್ರಿಯ ಮತ್ತು ಸದ್ಭಾವನಾ ಗೀತಗಳ ಗಾಯನ ಹಾಗೂ ಕಲಬುರಗಿ ಭಾರತ ಸೇವಾದಳ ಜಿಲ್ಲಾ ಸಮಿತಿಯಿಂದ ಸರ್ವಧರ್ಮೀಯ ಪ್ರಾರ್ಥನೆ ಜರುಗಲಿದೆ.