ಆ.೨೦ರಂದು ಡಿ.ದೇವರಾಜ ಅರಸು ಜಯಂತಿ ಆಚರಣೆಗೆ ಜಿಲ್ಲಾ ಆಡಳಿತ ನಿರ್ಧಾರ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೧೦ :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೨೦ರಂದು ಆಚರಿಸಲು ನಿರ್ಧರಿಸಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಡಿ. ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊAದಿಗೆ ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಶ್ರೀ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ಆಗಮಿಸಿ, ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗದ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದೇವರಾಜ್ ಅರಸು ಅವರ ಕುರಿತಾಗಿ ವಿಶೇಷ ಉಪನ್ಯಾಸ ನೀಡಲು, ಉಪನ್ಯಾಸಕ ಓರ್ವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಡಿ.ದೇವರಾಜ್ ಅರಸು ಅವರ ಕುರಿತಾಗಿ ಸುಂದರ ರೂಪಕ ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಡಿ. ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನೆರವೇರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಮಾಡಿಕೊಳ್ಳಬೇಕು. ವೇದಿಕೆ ಅಲಂಕಾರ, ನೀರಿನ ವ್ಯವಸ್ಥೆ, ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿ, ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತರಲು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಅರವಿಂದ ಹಿರೊಳ್ಳಿ, ವಿದ್ಯಾವತಿ ಅಂಕಲಗಿ, ಮಲ್ಲು ಬಿದರಿ, ಸೋಮನಾಥ ಕಳ್ಳಿಮನಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೀರೆಕರ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ಸಿದ್ದು ರಾಯಣ್ಣನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.