ಬಸವನ ಜನ್ಮಸ್ಥಳಕ್ಕೆ ಡಿಸಿ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಆ.೧೦: ಬಸವ ಜನ್ಮಸ್ಥಳ ಇಂಗಳೇಶ್ವರ ಗ್ರಾಮಕ್ಕೆ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಭೇಟಿ ನೀಡಿ ಬಸವೇಶ್ವರರ ಪುತ್ಥಳಿ ನಿರ್ಮಾಣ ಕುರಿತು ಸಮೀಕ್ಷೆ ನಡೆಸಿ ಮತ್ತೆ ಸ್ಮಾರಕಕ್ಕೆ ತೆರಳಿ ವೀಕ್ಷಣೆ ಮಾಡಿ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ವೀಕ್ಷಣೆ ಮಾಡಿದರು.
ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಶ್ರೀ ಬಸವೇಶ್ವರ ಸರ್ಕಲ್ ಮತ್ತು ಮೂರ್ತಿ ಪ್ರತಿಷ್ಠಾಪನಾ ನಿರ್ಮಾಣ ಕುರಿತು ಸಂಬAಧಿಸಿದ ತಹಶೀಲ್ದಾರರಿಂದ ಮಾಹಿತಿ ಪಡೆದರು. ಗಾವಠಾಣ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕುರಿತು ಪರಿಶೀಲನೆ ನಡೆಸಿದರು.
ಬಸವೇಶ್ವರ ಬಸವ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಅಂಬಿಗರ ಚೌಡಯ್ಯ ಸಮುದಾಯ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಹಾಲು ಬಾವಿ ಹಾಗೂ ವಿರಕ್ತಮಠದ ವಚನ ಶಿಲಾ ಮಂಟಪ ವೀಕ್ಷಣೆ ಮಾಡಿದರು.
ಬಸವನ ಬಾಗೇವಾಡಿಯ ಮೆಗಾ ಮಾರ್ಕೆಟ್ ಮತ್ತು ನಂದಿ ಮಾರ್ಕೆಟ್‌ಗೆೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಸವನ ಬಾಗೇವಾಡಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ದಿಢೀರ ಭೇಟಿ ನೀಡಿ, ಪರಿಶೀಲನೆ ನಡೆಸಿ, ಕ್ಯಾಂಟೀನ್‌ದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಜಿಲ್ಲಾಧಿಕಾರಿಗಳು ಆಹಾರ ಸವಿಯುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.