ಆ.೧೩ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು, ಆ.೯- ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ರಾಜ್ಯ ಸಮಿತಿಯ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ ೧೩ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ ಹನುಮಂತ ಮನ್ನಾಪೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಹಲವಾರು ಹೋರಾಟಗಳ ಫಲವಾಗಿ ಹಿಂದಿನ ಬಿಜೆಪಿ ಸರಕಾರ ಜಿ ಮಾಧುಸ್ವಾಮಿ ಅವರ ಒಳಮೀಸಲಾತಿ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಸರ್ವೋಚ್ಛ ನ್ಯಾಯಾಲಯ ಈಗ ಒಳಮೀಸಲಾತಿ ಕೊಡುವುದಕ್ಕೆ ಗ್ರೀನ್ ಸಿಗ್ನಲ್ ನೀಡಿರುವುದರಿಂದ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸದೆ ಒಳ ಮೀಸಲಾತಿ ಜಾರಿಗೊಳಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನರಸಿಂಹಲು, ಹೇಮರಾಜ್ ಅಸ್ಕಿಹಾಳ, ಆಂಜನೇಯ, ನರಸಿಂಹಲು ಸೇರಿದಂತೆ ಇತರರು ಉಪಸ್ಥಿತರಿದ್ದರು.